ಟಿವಿ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿಗೆ ಅದ್ದೂರಿ ತೆರೆ; ಗೆದ್ದು ಬೀಗಿದ ಹರ್ಷ ಸಿ.ಎಂ ಗೌಡ ತಂಡ

ಟಿವಿ ಸೆಲೆಬ್ರಿಟಿಗಳ ಟಿಪಿಎಲ್ ಸೀಸನ್ 2 ಕ್ರಿಕೆಟ್ ಟೂರ್ನಿಗೆ ಅದ್ದೂರಿ ತೆರೆ ಬಿದ್ದಿದೆ.  ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ನಡೆದ ಈ ಟೂರ್ನಿ ಮುಕ್ತಾಯವಾಗಿದ್ದು ಹರ್ಷ ಸಿಎಂ ಗೌಡ ತಂಡ ಗೆದ್ದು ಬೀಗಿದೆ. 

Harsha Cm Gowda team win tv celebrities cricket tournament TPL 2 sgk

ಸಿನಿಮಾ ಸೆಲೆಬ್ರಿಟಿಗಳ ಸಿಸಿಎಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದೆ, ಅದಕ್ಕೂ ಮೊದಲು ಸ್ಯಾಂಡಲ್ ವುಡ್ ಮಂದಿಯ ಕೆಸಿಸಿ ಟೂರ್ನಿ ಕೂಡ ಅದ್ದೂರಿಯಾಗಿ ನಡೆದು ಗ್ರ್ಯಾಂಡ್ ತೆರೆಬಿತ್ತು. ಅದರಲ್ಲಿ ಡಾಲಿ ಧನಂಜಯ್ ನೇತೃತ್ವದ ತಂಡ ಗೆದ್ದು ಬೀಗಿತ್ತು. ಅದರ ಬೆನ್ನಲ್ಲೆ ಟಿವಿ ಸೆಲೆಬ್ರಿಟಿಗಳು ಸಹ ಟಿಪಿಎಲ್ ಕ್ರಿಕೆಟ್ ಟೂರ್ನಿ ಆಯೋಜಿಸಿದ್ದರು. ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ನಡೆದ ಈ ಟೂರ್ನಿ ಕೂಡ ಮುಕ್ತಾಯವಾಗಿದ್ದು ಹರ್ಷ ಸಿಎಂ ಗೌಡ ತಂಡ ಗೆದ್ದು ಬೀಗಿದೆ. 

ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್. ಬಿ. ಆರ್ ಸಾರಥ್ಯದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್‌ಗೆ ಅದ್ದೂರಿ ತೆರೆ ಬಿದ್ದಿದೆ. ಹರ್ಷ ಸಿ.ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಪಿ ಮುಡಿಗೇರಿಸಿಕೊಂಡಿದೆ.

ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್ ಬಿ.ಆರ್ ಕಳೆದ ವರ್ಷದಿಂದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ (ಟಿಪಿಎಲ್) ಆರಂಭಿಸಿದ್ದಾರೆ. ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು. ಮಾರ್ಚ್ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು, ಅಂತಿಮವಾಗಿ ಹರ್ಷ ಸಿ.ಎಂ. ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ. ಮಂಜು ಪಾವಗಡ ನೇತೃತ್ವದ ಅಶ್ವಸೂರ್ಯ ರಿಯಾಲಿಟೀಸ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ. ಗಾಯಕ ವ್ಯಾಸರಾಜ್ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. 

14 ವರ್ಷದ ಛೋಟಾ ಬುಮ್ರಾನ ದಾಳಿಗೆ ವಿಕೆಟ್‌ ಚೆಲ್ಲಾಪಿಲ್ಲಿ..! ವಿಡಿಯೋ ವೈರಲ್

ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಒಟ್ಟು ಆರು ತಂಡಗಳು ಟಿಪಿಎಲ್ ಸೀಸನ್-2ನಲ್ಲಿ ಭಾಗವಹಿಸಿದ್ದವು.  ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ನಾಯಕತ್ವದಲ್ಲಿ ತಂಡಗಳನ್ನು ಮುನ್ನಡೆಸಲಾಗಿತ್ತು.

KCC League: 365 ದಿನದಲ್ಲಿ 363 ದಿನ ಕೆಲಸ ಮಾಡೋ ನಟ ಶಿವಣ್ಣನ ಸಂದರ್ಶನ ಮಾಡಿದ ಕಿಚ್ಚ ಸುದೀಪ್.!

ಐಶ್ವರ್ಯ ಸಿಂದೋಗಿ, ವಿರಾನಿಕ ಶೆಟ್ಟಿ, ರಾಶಿಕ ಶೆಟ್ಟಿ, ಸೊಹಾರ್ಧ, ಗಾನವಿ ಸುರೇಶ್, ಸೀಮಾ ವಸಂತ್, ಅದ್ವಿತಿ ಶೆಟ್ಟಿ, ಶ್ವೇತ ಪ್ರಸಾದ್, ಲಿಖಿತಾ ಅನಂತ್, ಯಶಸ್ವಿನಿ, ಆಶಿಕಾ ಗೌಡ, ಶ್ವೇತ ಕೊಗ್ಲೂರ್ ಟಿಪಿಎಲ್ ಸೀಸನ್ -2 ನಲ್ಲಿ ಅಂಬಾಸಿಡರ್ ಆಗಿ ಕಾಣಿಸಿಕೊಂಡಿದ್ದರು.

Latest Videos
Follow Us:
Download App:
  • android
  • ios