ಈಕೆ ನಿಜಕ್ಕೂ ಹಿಟ್ಲರ್​ ಕಲ್ಯಾಣ ಅಂತರನಾ? ಫ್ರಾಕ್​ ಡಾನ್ಸ್ ನೋಡಿ ಭಲೆ ಭಲೆ ಎಂದ ಫ್ಯಾನ್ಸ್​

ಹಿಟ್ಲರ್​ ಕಲ್ಯಾಣ ಅಂತರಾ ಹೊಸ ವೇಷಕ್ಕೆ ಫ್ಯಾನ್ಸ್​ ಫಿದಾ. ಬಿಳಿಯ ಫ್ರಾಕ್​ನಲ್ಲಿ ಮಿಂಚಿದ ನಟಿಯ ವಿಡಿಯೋ ವೈರಲ್​
 

Hitler Kalyana Antara new video gone viral actress shining in a white frock Fans reacts suc

ಜಿ ಟಿವಿಯಲ್ಲಿ ಪ್ರಸಾರ ಆಗ್ತಿದ್ದ ಹಿಟ್ಲರ್​ ಕಲ್ಯಾಣ ಸೀರಿಯಲ್​ ಮುಗಿದು ತಿಂಗಳುಗಳೇ ಆಗಿವೆ. ಆದರೆ ಅದರಲ್ಲಿ ನಟಿಸಿರುವ ನಟ-ನಟಿಯರನ್ನು ಇನ್ನೂ ಅಭಿಮಾನಿಗಳು ಮರೆತಿಲ್ಲ. ಅದರಲ್ಲಿಯೂ ಡಬಲ್​ ಷೇಡ್​ನಲ್ಲಿ ಕಾಣಿಸಿಕೊಂಡವರು ನಟಿ ರಜನಿ. ಎಜೆ ಮೊದಲ ಪತ್ನಿ ಅಂತರಾ ಆಗಿ ಕೊನೆಗೆ ವಿಲನ್​ ಪ್ರಾರ್ಥನಾ ಆಗಿ ಕಾಣಿಸಿಕೊಂಡ ರಜನಿ ನೆಗೆಟಿವ್​ ಷೇಡ್​ನಿಂದಲೇ ಎಲ್ಲರ ಮನ ಗೆದ್ದವರು. ಒಬ್ಬರೇ ವ್ಯಕ್ತಿ ಒಮ್ಮೆ ಅತಿ ಒಳ್ಳೆಯವರಂತೆ, ಇನ್ನೊಮ್ಮೆ ಅತಿ ಕೆಟ್ಟವರಂತೆ ಆ್ಯಕ್ಟಿಂಗ್​ ಮಾಡುವುದು ತುಸು ಕಷ್ಟವೇ. ಇಂಥ ಕಲೆ ಕೆಲವರಿಗೆ ಮಾತ್ರ ಕರಗತವಾಗಿರುತ್ತದೆ. ಅಂಥವರಲ್ಲಿ ಒಬ್ಬರು ರಜನಿ.  ಮೊದಲಿಗೆ ಸೌಮ್ಯ ರೂಪದ ಅಂತರಾಳ ರೂಪವನ್ನೇ ಪಡೆದಿರುವ ವಿಲನ್​ ಪ್ರಾರ್ಥನಾ ತಾನೇ ಅಂತರಾ ಎಂದುಕೊಂಡು ಮನೆಯವರನ್ನು ನಂಬಿಸಿದ್ದಳು. ಕೊನೆಗೂ ಸಿಕ್ಕಿಬಿದ್ದಳೆನ್ನಿ.  ಅದೇನೆ ಇದ್ದರೂ ಅಂತರಾ ಹಾಗೂ ಪ್ರಾರ್ಥನಾ ಪಾತ್ರಕ್ಕೆ ಜೀವ ತುಂಬಿರುವ ನಟಿ ರಜನಿ.  

ಸೋಷಿಯಲ್​  ಮೀಡಿಯಾದಲ್ಲಿ ರಜನಿ ಸಕತ್​ ಬಿಜಿಯಾಗಿದ್ದಾರೆ.  ಆಗಾಗ್ಗೆ ರೀಲ್ಸ್​ಗಳನ್ನು ಶೇರ್​ ಮಾಡುತ್ತಿರುತ್ತಾರೆ. ಇದೀಗ ಅವರು ಫ್ರಾಕ್​ನಲ್ಲಿ ನಟಿ ಮಿಂಚಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಟ್ರೆಂಡಿಂಗ್​ನಲ್ಲಿ ಇರೊ ಕಾಟು ಮೇಲಾ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಇವರ ರೀಲ್ಸ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ವೈಟ್​ ಡ್ರೆಸ್​ ನಿಮಗೆ ತುಂಬಾ ಚೆನ್ನಾಗಿ ಕಾಣುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಹಿಟ್ಲರ್​ ಕಲ್ಯಾಣದ ಅಂತರಾ ಪಾತ್ರಧಾರಿ ರಜನಿ WANTED! ಅಭಿಮಾನಿಗಳಿಗೆ ಶಾಕ್​ ಕೊಟ್ಟ ನಟಿ

ಅಂದಹಾಗೆ ರಜನಿ ಕುರಿತು ಹೇಳುವುದಾದರೆ,  ಅಮೃತವರ್ಷಿಣಿ ಧಾರಾವಾಹಿಯಲ್ಲಿ ನಾಯಕಿ ಪಾತ್ರದಲ್ಲಿ ನಟಿಸಿದ್ದ ರಜನಿ, ನಂತರ ವಿಭಿನ್ನ ಪಾತ್ರಗಳ ಮೂಲಕ ಕಿರುತೆರೆಯಲ್ಲಿ ಮತ್ತು ಹಿರಿತೆರೆಯಲ್ಲಿ ಮಿಂಚಿದ್ದರು. ಸೋಶಿಯಲ್ ಮೀಡಿಯಾದಲ್ಲೂ ನಟಿ ಸದಾ ಆಕ್ಟೀವ್ ಆಗಿರುತ್ತಾರೆ. ಯಾವಾಗಲೂ ರೀಲ್ಸ್ ಮಾಡುತ್ತಾ, ಅಥವಾ ಫೋಟೋ ಶೂಟ್ ಮಾಡಿಸಿ  ಶೇರ್ ಮಾಡುತ್ತಿರುತ್ತಾರೆ.  ಕೆಲ ದಿನಗಳ ಹಿಂದೆ ನಟಿ ಮೈಚಳಿ ಬಿಟ್ಟು ಇದೀಗ ಸ್ವಾತಿ ಮುತ್ತಿನ ಮಳೆ ಹನಿಯೇಗೆ ಡ್ಯಾನ್ಸ್​ ಮಾಡಿದ್ದು, ಅದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದರು. 

ಕೊನೆಗೆ ಸ್ಲಿಟ್​ ಡ್ರೆಸ್​ನಲ್ಲಿ ಸುಂದರ ಕಾಲಿನಪ್ರದರ್ಶನ ಮಾಡುತ್ತಾ ಹಾಟ್​ ಆಗಿ ಕಾಣಿಸಿಕೊಂಡಿದ್ದರು. ಇವರು ವಿಡಿಯೋ ಶೇರ್​ ಮಾಡಿದಾಗಲೆಲ್ಲಾ ಇವರ ಕಾಲಿನ ಮೇಲೆ ನೆಟ್ಟಿಗರ ಕಣ್ಣು ಹೋಗಿರುತ್ತದೆ. ಈಗಲೂ ಕಾಲು ಸೂಪರ್​ ಎಂದು ಕೆಲವರು ಹೇಳಿದ್ದಾರೆ.  

ಸೀರಿಯಲ್​ ಶೂಟಿಂಗ್​ನಲ್ಲಿ ಹೀಗಿರತ್ತೆ ರೊಮಾನ್ಸ್! ತಬ್ಬಿಕೊಂಡ ನಟ-ನಟಿಯನ್ನು ಎಬ್ಬಿಸಲು ಹರಸಾಹಸ

 
 
 
 
 
 
 
 
 
 
 
 
 
 
 

A post shared by Rajini (@rajiniiofficial)

Latest Videos
Follow Us:
Download App:
  • android
  • ios