ಬಿಗ್ ಬಾಸ್ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಕಿಚ್ಚ; ಆಗಸ್ಟ್‌ನಲ್ಲಿ ಆರಂಭ, ಈ ಬಾರಿ ಇದೆ ಹಲವು ವಿಶೇಷ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುವ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಬಿಗ್ ಬಾಸ್ ಸೀಸನ್ 9ಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9 ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಹೌದು ಬಹುನಿರೀಕ್ಷೆಯ ಬಿಗ್ ಬಾಸ್ ಆಗಸ್ಟ್ ಮೊದಲ ವಾರದಿಂದ ಆರಂಭವಾಗಲಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಆಗಸ್ಟ್ ಮೊದಲ ವಾರದಲ್ಲಿ ಬಿಗ್ ಬಾಸ್ ಆರಂಭ
ವೂಟ್‌ಗೆ ಮಿನಿ ಸೀಸನ್, ಕಲರ್ಸ್‌ನಲ್ಲಿ ಬಿಗ್ ಸೀಸನ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುವ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಬಿಗ್ ಬಾಸ್ ಸೀಸನ್ 9ಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9 ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಹೌದು ಬಹುನಿರೀಕ್ಷೆಯ ಬಿಗ್ ಬಾಸ್ ಆಗಸ್ಟ್ ಮೊದಲ ವಾರದಿಂದ ಆರಂಭವಾಗಲಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಈ ಬಾರಿಯ ಬಿಗ್ ಬಾಸ್ ಮತ್ತಷ್ಟು ವಿಶೇಷವಾಗಿ ಮೂಡಿಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಬಾರಿಯಂತೆ ಬಾರಿಯೂ ಸಹ ವೂಟ್ ಸೆಲೆಕ್ಟ್ ನಲ್ಲಿಯೂ ಬಿಗ್ ಬಾಸ್ ಪ್ರಸಾರವಾಗಲಿದೆ. ಓಟಿಟಿಯಲ್ಲಿ ಮತ್ತು ಕಲರ್ಸ್ ವಾಹಿನಿಯಲ್ಲಿ ಎರಡು ರೀತಿಯ ಬಿಗ್ ಬಾಸ್ ಸೀಸನ್‌ಗಳನ್ನು ಪ್ರಸಾರ ಮಾಡಲು ಕಲರ್ಸ್ ಸಂಸ್ಥೆ ನಿರ್ಧರಿಸಿದೆ.
ಕಲರ್ಸ್ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆರಂಭವಾಗುವ ಮೊದಲೇ ವೂಟ್ ಸೆಲೆಕ್ಟ್ ನಲ್ಲಿ ಬಿಗ್ ಬಾಸ್ ಮಿನಿ ಸೀಸನ್ ಪ್ರಸಾರವಾಗಲಿದೆ. ಈ ಮಿನಿ ಸೀಸನ್ 42 ದಿನಗಳ ಕಾಲ ಪ್ರಸಾರವಾಗಲಿದ್ದು, ಇಂಟರ್‌ನೆಟ್ ಸ್ಟಾರ್‌ಗಳು, ಇನ್‌ಫ್ಲುಯೆನ್ಸರ್‌ಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದಿನಿಂತೆ ಸುದೀಪ್ ವಾರದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಮಿನಿ ಸೀಸನ್‌ನಲ್ಲಿ ಆಯ್ಕೆಯಾದ ಒಂದಿಬ್ಬರು ಸ್ಪರ್ಧಿಯಲ್ಲಿ ವಾಹಿನಿಯಲ್ಲಿ ಪ್ರಸಾರವಾಗುವ ಪೂರ್ಣ ಪ್ರಮಾಣದ ಬಿಗ್ ಬಾಸ್‌ನಲ್ಲಿ ಭಾಗವಹಿಸುತ್ತಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ 90 ದಿನಗಳ ಕಾಲ ಪ್ರಸಾರವಾಗಲಿದೆ.
ಅಂದಹಾಗೆ ಇದೇ ರೀತಿ ಕಳೆದ ಬಾರಿ ಹಿಂದಿಯಲ್ಲಿ ಮೊದಲ ಪ್ರಯತ್ನ ಮಾಡಲಾಗಿತ್ತು. ಹಿಂದಿಯಲ್ಲಿ ಕರಣ್ ಜೋಹರ್ ನಡೆಸಿಕೊಟ್ಟಿದ್ದರು. ಒಟಿಟಿ ಬಳಿಕ ಬಿಗ್ ಬಾಸ್ ಟಿವಿಯಲ್ಲಿ ಪ್ರಸಾರವಾಗಿತ್ತು. ಈ ಬಾರಿ ಕನ್ನಡದಲ್ಲೂ ಅದೇ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಕನ್ನಡದಲ್ಲಿ ಪ್ರಸಾರವಾಗುವ ಒಟಿಟಿ ಬಿಗ್ ಬಾಸ್ ಅನ್ನು ಸಹ ಕಿಚ್ಚ ಸುದೀಪ್ ಅವರೆ ನಡೆಸಿಕೊಡಲಿದ್ದಾರೆ. ಬಳಿಕ ಟಿವಿಯಲ್ಲಿ ಆರಂಭವಾಗುವ ಬಿಗ್ ಬಾಸ್ ಜವಾಬ್ದಾರಿ ಸಹ ಸುದೀಪ್ ಮೇಲಿದೆ.
ಸುದೀಪ್‌ರಿಂದ ಮತ್ತೊಂದು ಮಹತ್ತರ ಕಾರ್ಯ; ಅನಾಥ ಮಹಿಳೆಗೆ ಮನೆ ನಿರ್ಮಾಣ
ಕಳೆದ 8 ಸೀಸನ್ ಸಹ ಅದ್ಭುತವಾಗಿ ಮೂಡಿಬಂದಿದೆ. ಕೊರೊನಾ ಕಾಲದಲ್ಲೂ ಬಿಗ್ ಬಾಸ್ ಅನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ ಕಿಚ್ಚ ಸುದೀಪ್. ಕನ್ನಡ ಬಿಗ್ ಬಾಸ್ ಶೋ ಭಾರತದಲ್ಲಿ ಪ್ರಸಾರವಾಗುತ್ತಿರುವ ಬೇರೆ ಬೇರೆ ಭಾಷೆಯ ಬಿಗ್ ಬಾಸ್ ಶೋಗಳಿಗೆ ಮಾದರಿಯಾಗಿದೆ. ಕಿಚ್ಚ ಸುದೀಪ್ ಅವರ ಅದ್ಭುತ ನಿರೂಪಣೆ ಸೈಲಿಯೊಂದಿಗೆ ಬಿಗ್ ಬಾಸ್ ಪ್ರತಿಬಾರಿ ಯಶಸ್ಸು ಕಾಣುತ್ತಿದೆ. ಈ ಬಾರಿ ಸಾಕಷ್ಟು ವಿಶೇಷತೆಗಳೊಂದಿಗೆ ಬರ್ತಿರುವ ಬಿಗ್ ಬಾಸ್ ಶೋನಲ್ಲಿ ಯಾರೆಲ್ಲ ಕಾಣಿಸಿಕೊಳ್ಳುತ್ತಿದ್ದಾರೆ, ಯಾವೆಲ್ಲ ಸೆಲೆಬ್ರಿಟಿಗಳು ಭಾಗಿಯಾಗುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
Dance Karnataka Dance: ಕೈಯಿಲ್ಲದ ಅದ್ಭುತ ಡ್ಯಾನ್ಸರ್‌ನ ಬಾಚಿ ತಬ್ಬಿದ್ರು ಕಿಚ್ಚ ಸುದೀಪ್
ಈ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿ ‘ಕಲರ್ಸ್ ಕನ್ನಡದ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ಈ ಸಲ ವಿಭಿನ್ನವಾಗಿ ಪ್ಲಾನ್‌ಗಳನ್ನು ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ಸೆಟ್‌ಗೆ ಹೋಗಲು ನಾನಂತೂ ಎಕ್ಸೈಟ್ ಆಗಿದ್ದೇನೆ’ ಎಂದು ಹೇಳುತ್ತಾರೆ.