ಹಿರಿಯ ಕಲಾವಿದರಿಗೆ ನೆರವು ನೀಡುವ ಉದ್ದೇಶದಿಂದ ಆಯೋಜಿಸಿದ ಟಿಪಿಎಲ್ ಕಪ್ ಟೂರ್ನಿಯಲ್ಲಿ ಬಜರಂಗಿ ಲಯನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ
ಬೆಂಗಳೂರು(ಆ.22): ಭಾರಿ ಕುತೂಹಲ ಕೆರಳಿಸಿದ್ದ ಕಿರುತೆರೆ ಕಲಾವಿದರ ಕ್ರಿಕೆಟ್ ಟೂರ್ನಿ ಅಂತ್ಯಗೊಂಡಿದೆ. ಎನ್ 1 ಅಕಾಡೆಮಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಟಿಪಿಎಲ್ ಕಪ್ ಟೂರ್ನಿಯಲ್ಲಿ ಬಜರಂಗಿ ಲಯನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹಿರಿಯ ಕಲಾವಿದರಿಗೆ ನೆರವು ನೀಡುವ ಉದ್ದೇಶದಿಂದ ಈ ಟೂರ್ನಿ ಆಯೋಜಿಸಲಾಗಿತ್ತು. ಆಗಸ್ಟ್ 18 ರಿಂದ 20ರ ವರೆಗೆ ನಡೆದ ಕ್ರಿಕೆಟ್ ಟೂರ್ನಿಯಲ್ಲಿ ರಂಜಿತ್ ಕುಮಾರ್ ನಾಯಕತ್ವದ ಬಜರಂಗಿ ಲಯನ್ಸ್ ಟಿಪಿಎಲ್ ಕಪ್ ಗೆದ್ದುಕೊಂಡಿತ್ತು. ಹರ್ಷ ಸಿಎಂ ಗೌಡ ನಾಯಕತ್ವದ ಎಂಜಲ್ XI ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಒಟ್ಟು ಆರು ತಂಡಗಳು ಈ ಟೂರ್ನಮೆಂಟ್ ನಲ್ಲಿ ಭಾಗಿಯಾಗಿದ್ದವು. ಈ ಟೂರ್ನಿಯಿಂದ ಸಂಗ್ರಹಿಸಿ ಮೊತ್ತವನ್ನು ಕಿಡ್ನಿ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿರುವ ಧಾರಾವಾಹಿ ಪ್ರೊಡಕ್ಷನ್ ಮ್ಯಾನೇಜರ್ ಪಾರ್ಥ ಅವರಿಗೆ ನೀಡಲಾಗಿದೆ.
ಬೆಂಗಳೂರಿನ ಪೆಸೆಟ್ ಕಾಲೇಜು ಮೈದಾನದಲ್ಲಿ ಪಂದ್ಯ ಆಯೋಜಿಸಲಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಟೂರ್ನಿ ಆಯೋಜಿಸಲಾಗಿತ್ತು. ಟೂರ್ನಿ ಆರಂಭಕ್ಕೂ ಮುನ್ನ ಖಾಸಗಿ ಹೊಟೆಲ್‌ನಲ್ಲಿ ತಂಡಗಳ ಜರ್ಸಿ ಅನಾವರಣಗೊಳಿಸಲಾಗಿತ್ತು. ಇದೇ ಮೊದಲ ಬಾರಿಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ. ಐಪಿಎಲ್ ಟೂರ್ನಿ ರೀತಿಯಲ್ಲಿ ನಡೆಸುವ ಯೋಚನೆ ಇತ್ತು. ಆದರೆ ಮೊದಲ ಹಂತದಲ್ಲಿ ಅತ್ಯುತ್ತಮ ರೀತಿಯಲ್ಲಿ ಟೂರ್ನಿ ಆಯೋಜಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಐಪಿಎಲ್ ಟೂರ್ನಿ ರೀತಿ ಹರಾಜು ಪ್ರಕ್ರಿಯೆಗಳನ್ನು ನಡೆಸಿ ಟೂರ್ನಿ ಆಯೋಜಿಸಲಿದ್ದೇವೆ ಎಂದು ಆಯೋಜಕ ಬಿ.ಆರ್.ಸುನಿಲ್ ಕುಮಾರ್ ಹೇಳಿದ್ದಾರೆ.
ಜೊತೆ ಜೊತೆಯಲಿ; ನಟ ಅನಿರುದ್ಧ್ ಜಾಗಕ್ಕೆ 'ವಿಕ್ರಾಂತ್ ರೋಣ' ನಿರ್ದೇಶಕ ಅನೂಪ್ ಭಂಡಾರಿ
ದಿ ಬುಲ್ ಸ್ಕ್ವಾಡ್, ಭಜರಂಗಿ ಲಯನ್ಸ್, ಎಂಜೆಲ್ XI, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿತ್ತು. ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ. . ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಮಾಲೀಕರಿದ್ದು, ಅತ್ಯಂತ ರೋಚಕ ಹೋರಾಟವೂ ಏರ್ಪಟ್ಟಿತ್ತು.
ದಿ ಬುಲ್ ಸ್ಕ್ವಾಡ್ ಟೀಂಗೆ ಶರತ್ ಪದ್ಮನಾಭ್ ನಾಯಕನಾಗಿದ್ದು, ಈ ತಂಡದ ಒಡೆತನವನ್ನು ಮೋನಿಶ್ ಹೊತ್ತುಕೊಂಡಿದ್ರೆ, ಭಜರಂಗಿ ಲಯನ್ಸ್ ಗೆ ರಂಜಿತ್ ಕುಮಾರ್ ನಾಯಕ- ಮಹೇಶ್ ಗೌಡ ಓನರ್, ಎಂಜಲ್ XI ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ-ಜಗದೀಶ್ ಬಾಬು ಆರ್ ಓನರ್, ವಿನ್ ಟೈಮ್ ರಾಕರ್ಸ್ ತಂಡಕ್ಕೆ ಅರ್ಜುನ್ ಯೋಗಿ ನಾಯಕ-ಅನಿಲ್ ಬಿಆರ್ ಮತ್ತು ದೇವನಾಥ್ ಓನರ್, ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಮಂಜು ಪಾವಗಡ ನಾಯಕ-ರಂಜಿತ್ ಕುಮಾರ್ ಓನರ್, ಸ್ಯಾಂಡಲ್ ವುಡ್ ಕಿಂಗ್ಸ್ ತಂಡಕ್ಕೆ ವಿವಾನ್ ನಾಯಕ-ದೀಪಶ್ರೀ ಮಿಸ್ಟ್ರೀ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
