ರಾಜಕೀಯ ಸೇರಿದ ನಂತರ ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದ ಕನ್ನಡ ಚಿತ್ರರಂಗದ 'ಪುಟ್ಟಮಲ್ಲಿ', ನವರಸಗಳನ್ನು ಅದ್ಭುತವಾಗಿ ನಟಿಸುವ ಕಲಾವಿದೆ ಉಮಾಶ್ರೀ ಮತ್ತೆ ತೆರೆ ಮೇಲೆ ಬರಲಿದ್ದಾರೆ. ಬೆಳ್ಳಿ ತೆರೆ ನೆಲೆ ಕಮಾಲ್ ಮಾಡಲು ಸಜ್ಜಾಗಿದ್ದಾರೆ. 

ರಾಜಕೀಯ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಿಂದ ಸಿನಿಮಾಗಳಿಂದ ಕೆಲ ಕಾಲ ದೂರ ಉಳಿದಿದ್ದರು. ಇದೀಗ ಮತ್ತೆ ಕಿರುತೆರೆಗೆ ವಾಪಸ್ಸಾಗುತ್ತಿದ್ದಾರೆ. 

ಈಗೀಗ ಸಿನಿಮಾ ತಾರೆಯರು ಕಿರುತೆರೆಗೆ ಬರುತ್ತಿರುವುದು ಹೆಚ್ಚಾಗಿದೆ.  ಅದೇ ರೀತಿ  ಉಮಾಶ್ರೀ ಮತ್ತೆ ಕಮ್ ಬ್ಯಾಕ್ ಆಗಲಿದ್ದಾರೆ.    ಸ್ಟಾರ್ ಸುವರ್ಣದಲ್ಲಿ 'ಆರತಿಗೊಬ್ಬ ಕೀರ್ತಿಗೊಬ್ಬ' ಎನ್ನುವ ಹೊಸ ಧಾರಾವಾಹಿ ಬರುತ್ತಿದೆ. ಈ ಧಾರಾವಾಹಿ ಮೂಲಕ ಉಮಾಶ್ರೀ ಕಿರುತೆರೆಗೆ ಕಾಲಿಡಲಿದ್ದಾರೆ.  ಈ ಧಾರಾವಾಹಿಯಲ್ಲಿ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

 

ಆರತಿಗೊಬ್ಬ ಕೀರ್ತಿಗೊಬ್ಬ ಧಾರಾವಾಹಿಯಲ್ಲಿ ಪೂರ್ಣಚಂದ್ರ ತೇಜಸ್ವಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಧನ್ಯಾ, ಮೇಘನಾ ಶೆಣೈ ನಾಯಕಿಯರಾಗಿ ನಟಿಸಲಿದ್ದಾರೆ. ಡಿ. 23 ರಿಂದ ಸ್ಟಾರ್ ಸುವರ್ಣದಲ್ಲಿ ಈ ಸೀರಿಯಲ್ ಪ್ರಸಾರವಾಗಲಿದೆ.