Asianet Suvarna News Asianet Suvarna News

ನನ್ನ ಫೆವರೇಟ್​ ನಾನೇ ಎನ್ನುತ್ತ ರೀಲ್ಸ್​ ಮಾಡಿದ ನಿವೇದಿತಾ: ಕೂದಲೇನಾಯ್ತು ಕೇಳಿದ ಫ್ಯಾನ್ಸ್​!

ನನ್ನ ಫೆವರೇಟ್​ ನಾನೇ ಎನ್ನುತ್ತ ರೀಲ್ಸ್​ ಮಾಡಿದ ನಿವೇದಿತಾ ಗೌಡ. ಇಲ್ಲೂ ಅಭಿಮಾನಿಗಳಿಗೆ ನಟಿಯ ಕೂದಲಿಂದೇ ಚಿಂತೆ. ಕೂದಲೇನಾಯ್ತು ಕೇಳ್ತಿದ್ದಾರೆ ಫ್ಯಾನ್ಸ್​!
 

Nivedita Gowda made reels saying that she is her favorite fans are worried about hair suc
Author
First Published Mar 10, 2024, 3:57 PM IST

ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. ಹಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ.  ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. ಬಾರ್ಬಿ ಡಾಲ್ ಎಂದೂ ಅಭಿಮಾನಿಗಳಿಂದ ಕರೆಸಿಕೊಳ್ತಿರೋ ಈಕೆ ಹಾಕುವ ವಿಡಿಯೋ (Video), ಫೋಟೋಗಳಿಗಾಗಿಯೇ ಫ್ಯಾನ್ಸ್ ಕಾತರದಿಂದ ಕಾಯ್ತಾ ಇರ್ತಾರೆ.      ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

ನಿವೇದಿತಾ- ಚಂದನ್​ಶೆಟ್ಟಿ ದಾಂಪತ್ಯಕ್ಕೆ ನಾಲ್ಕು ವರ್ಷ: ಹೊಸ ಚಿತ್ರದ ರೊಮ್ಯಾಂಟಿಕ್​ ಮೂಡ್​ನಲ್ಲಿ ದಂಪತಿ

ಇದೀಗ ನಟಿ, ನನ್ನನ್ನು ಕಂಡ್ರೆ ನನಗೆ ತುಂಬಾ ಪ್ರೀತಿ, ನನ್ನ ಫೆವರೆಟ್​ ನಾನೇ ಎನ್ನುತ್ತಾ ಹಿಂದಿ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ನಿವೇದಿತಾ ಮೊದಲಿನಿಂದಲೂ ಉದ್ದನೆಯ ಕೂದಲಿಗೆ ಫೇಮಸ್​. ಬಿಗ್​ಬಾಸ್​ನಲ್ಲಿಯೂ ಇವರ ಕೂದಲನ್ನೇ ಪ್ರೀತಿಸ್ತದ್ದೋರು ಹೆಚ್ಚು. ನಂತರ ಅದನ್ನು ಕಟ್​ ಮಾಡಿದಾಗ ಫ್ಯಾನ್ಸ್​ ಬೇಸರ ವ್ಯಕ್ತಪಡಿಸಿದ್ದರು. ಈಗ ಈ ರೀಲ್ಸ್​ನಲ್ಲಿ ಚಿಕ್ಕ ಹೇರ್​ಸ್ಟೈಲ್​ ನೋಡಿ ಮತ್ತೆ ಕೂದಲ ಬಗ್ಗೆ ಅಭಿಮಾನಿಗಳು ಮಾತನಾಡಿದ್ದಾರೆ. ಕೆಲವರು ನಿಮಗೆ ಈ ಹೇರ್​ಸ್ಟೈಲ್​ ಚೆನ್ನಾಗಿ ಕಾಣಿಸುತ್ತದೆ ಎಂದಿದ್ದರೆ, ಮತ್ತೆ ಹಲವರು ಕೂದಲೆಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ. 

ಅಂದಹಾಗೆ ಈಚೆಗೆ,  ನಿವೇದಿತಾ  ಮತ್ತು ಚಂದನ್​ ಶೆಟ್ಟಿ ಅವರು ನಾಲ್ಕನೆಯ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.  2020ರ ಇದೇ ದಿನ ಮದ್ವೆಯಾಗಿದ್ದ ಜೋಡಿಗೆ ಈಗ ನಾಲ್ಕನೇ ಮದುವೆ ದಿನದ ಸಂಭ್ರಮ. ಈ ಸಂದರ್ಭದಲ್ಲಿ ಜೊತೆಯಾಗಿ ರೊಮ್ಯಾನ್ಸ್​ ಮಾಡಿದ ವಿಡಿಯೋ ಒಂದನ್ನು ನಿವೇದಿತಾ ಶೇರ್​ ಮಾಡಿಕೊಂಡಿದ್ದರು. ಇವರಿಬ್ಬರೂ ಜೊತೆಯಾಗಿ ನಟಿಸ್ತಿರೋ ಕ್ಯಾಂಡಿ ಕ್ರಶ್​ ಮೂವಿಯ ಮೇಕಿಂಗ್​ ವಿಡಿಯೋ ಇದಾಗಿದ್ದು, ಜೋಡಿ ಇದರಲ್ಲಿ ತುಂಬಾ ಮುದ್ದಾಗಿ ಕಾಣಿಸುತ್ತಿದ್ದರು. 

ಅಡುಗೆ ಮನೆಯಲ್ಲಿ ಬಿಗ್​ಬಾಸ್​ ನಿವೇದಿತಾ- ತನಿಷಾ: ಹಾಲನ್ನು ಎಲ್ಲಿ ಸೇರಿಸ್ಲಿ ಎಂದು ಕೇಳಿದ ಬೆಡಗಿ!

 

 

Follow Us:
Download App:
  • android
  • ios