ನನ್ನ ಹೊಸ ಹೇರ್​ ಕಲರ್​ ನೋಡಿದ್ರಾ ಅಂತ ಕೇಳಿರೋ ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಹೊಸ ರೀಲ್ಸ್​ ಶೇರ್​ ಮಾಡಿದ್ರೆ,  ಟ್ರೋಲಿಗರು ಹೀಗೆಲ್ಲಾ ಹೇಳೋದಾ? 

ಸದ್ಯ ಸೋಷಿಯಲ್​ ಮೀಡಿಯಾದಲ್ಲಿಯೇ ಹೆಚ್ಚು ಸದ್ದು ಮಾಡುತ್ತಿರುವ ನಟಿಯರ ಪೈಕಿ ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಒಬ್ಬರು. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​ ಮಾಡುತ್ತಾರೆ. ಬಾರ್ಬಿ ಡಾಲ್ ಎಂದೂ ಅಭಿಮಾನಿಗಳಿಂದ ಕರೆಸಿಕೊಳ್ತಿರೋ ಈಕೆ ಹಾಕುವ ವಿಡಿಯೋ (Video), ಫೋಟೋಗಳಿಗಾಗಿಯೇ ಫ್ಯಾನ್ಸ್ ಕಾತರದಿಂದ ಕಾಯ್ತಾ ಇರ್ತಾರೆ. ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ. ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

ಇತ್ತೀಚಿಗೆ ಹೆಚ್ಚಿನ ಹುಡುಗಿಯರು ಫ್ಯಾಷನ್​ ಹೆಸರಿನಲ್ಲಿ ಹೆಚ್ಚಾಗಿ ಷಾರ್ಟ್ಸ್​, ಮಿನಿ ಸ್ಕರ್ಟ್​ ಅನ್ನೇ ಹೆಚ್ಚು ಇಷ್ಟಪಡುತ್ತಾರೆ. ಅದರಲ್ಲಿಯೂ ಸಿನಿಮಾ ತಾರೆಯರನ್ನು ನೋಡಿ ಧಾರಾಳ ದೇಹ ಪ್ರದರ್ಶನ ಮಾಡುವುದು ಎಂದರೂ ಹಲವರಿಗೆ ಇನ್ನಿಲ್ಲದ ಖುಷಿ. ಈ ರೀತಿಯ ಬಟ್ಟೆ ಧರಿಸಿದರೆ ತಾವೂ ಸೆಲೆಬ್ರಿಟಿ ಎನಿಸುತ್ತದೆಯೋ ಏನೋ, ಒಟ್ಟಿನಲ್ಲಿ ಬಟ್ಟೆಯ ವಿಷಯದಲ್ಲಿ ಹಲವು ಹುಡುಗಿಯರು ಎಲ್ಲಾ ಮಿತಿಗಳನ್ನೂ ಮೀರುತ್ತಿದ್ದಾರೆ. ಇದು ಸಾಮಾನ್ಯ ಜನರ ಮಾತಾದರೆ ಇನ್ನು ನಟಿಯರ ವಿಷಯ ಹೇಳುವುದೇ ಬೇಡ ಬಿಡಿ. ಕೆಲವರಿಗೆ ಇಂಥ ಬಟ್ಟೆಗಳು ಯಾವುದೇ ರೀತಿಯಲ್ಲಿ ಅಸಹ್ಯ ಎನಿಸದಿದ್ದರೂ, ಕೆಲವರು ಇಂಥ ಬಟ್ಟೆ ಧರಿಸಿದಾಗ ವಾಕರಿಕೆ ಬರುವುದೂ ಉಂಟು. ಆದರೆ ಬಿಗ್​ಬಾಸ್ ಖ್ಯಾತಿಯ ನಟಿ ನಿವೇದಿತಾ ಯಾವುದೇ ರೀತಿಯ ತುಂಡುಡುಗೆ ಹಾಕಿದರೂ ಆಕೆಗೆ ಒಪ್ಪುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೂ ಇತ್ತೀಚೆಗೆ ನಿವೇದಿತಾ ಗೌಡ ಹೆಚ್ಚಾಗಿ ಷಾರ್ಟ್ಸ್​ ಧರಿಸಿ ರೀಲ್ಸ್​ ಮಾಡುತ್ತಾರೆ.

ತಿನ್ನೋದು ಕನ್ನಡ ಅನ್ನ, ಇಷ್ಟಪಡೋದು ಇಂಗ್ಲಿಷ್​ ಹಾಡಾ? ನಿವೇದಿತಾಗೆ ನೆಟ್ಟಿಗರ ಕ್ಲಾಸ್​

ಅಷ್ಟಕ್ಕೂ, ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​ ಮಾಡುತ್ತಾರೆ. ಹಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ. ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ. ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

ಸದಾ ಇಂಗ್ಲಿಷ್​ ಹಾಡಿನಿಂದಲೇ ರೀಲ್ಸ್​ ಮಾಡ್ತಿರೋ ನಟಿಗೆ ಕನ್ನಡದಲ್ಲಿ ಡ್ಯಾನ್ಸ್​ ಮಾಡಿ ಎಂದು ಹೇಳುತ್ತಿದ್ದರೂ ಇಂಗ್ಲಿಷ್​ ಹಾಡನ್ನೇ ಆಯ್ಕೆ ಮಾಡಿಕೊಳ್ಳುವುದು ನಿಂತಿಲ್ಲ. ಹಿಂದೊಮ್ಮೆ ಉದ್ದ ಕೂದಲು ಹೊಂದಿದ್ದ ನಟಿ, ಈಗ ಕೂದಲು ಕಟ್​ ಮಾಡಿಕೊಂಡು ಫ್ಯಾನ್ಸ್​ಗೆ ಬೇಸರ ತರಿಸುವುದು ಇದೆ. ಇದರ ನಡುವೆಯೇ ಇದೀಗ, DJ DIGI DIGI JAM BAM X POKE POKEMON ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಇದರಲ್ಲಿ ಅವರು ನನ್ನ ಹೊಸ ಹೇರ್​ ಕಲರ್​ ನೋಡಿರುವಿರಾ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅದರಕ್ಕೆ ಹಲವಾರು ಮಂದಿ ಬ್ಯೂಟಿಫುಲ್​ ಎಂದು ಹೇಳಿದ್ದರೆ, ಇನ್ನು ಕೆಲವರು ಹಾರ್ಟ್​ ಇಮೋಜಿ ಹಾಕಿದ್ದಾರೆ. ಆದರೆ ಮತ್ತೆ ಕೆಲವರು ನಟಿಯ ಕಾಲೆಳೆದಿದ್ದು, ಈ ರೀತಿಯ ಡ್ರೆಸ್​ ಮಾಡಿಕೊಂಡು ತಲೆಗೂದಲು ನೋಡಿ ಎಂದ್ರೆ ಹೇಗೆ? ಬೇರೆಯದ್ದೇ ನೋಡೋ ಹಾಗಿದೆಯಲ್ಲ ಎಂದು ಹೇಳಿದ್ದಾರೆ. ನಮಗೆ ನಿಮ್ಮ ಹೇರ್​ ಕಲರ್​ ಕಾಣಿಸ್ಲೇ ಇಲ್ಲ ಎಂದು ಕೆಲವರು ಹೇಳ್ತಿದ್ರೆ, ಅದಕ್ಕೆ ರಿಪ್ಲೈ ಮಾಡಿರುವ ಇನ್ನು ಕೆಲವರು, ನಿಮಗೆ ಕಾಣಿಸ್ತಿರೋದೇ ಬೇರೆ ಅಲ್ವಾ ಅಂತ ತಮಾಷೆ ಮಾಡುತ್ತಿದ್ದಾರೆ.


ಕಾಶ್ಮೀರದಲ್ಲಿ ಸಿಕ್ಕಾಕ್ಕೊಂಡ ಡಾ.ಬ್ರೋ: ಕ್ಯಾಮೆರಾ ಬಂದ್​ ಮಾಡಲ್ಲ, ಕನ್ನಡಿಗರಿಗೆ ತೋರಿಸ್ತೀನಿ ಎಂದು ಓಡಿದ ಗಗನ್​!

View post on Instagram