ಕೆಂಪು ಸೀರೆಯಲ್ಲಿ ನೃತ್ಯದಿಂದ ಕಿಚ್ಚು ಹೊತ್ತಿಸಿದ್ದಾರೆ ಶ್ರೀರಸ್ತು ಶುಭಮಸ್ತು ಸೀರಿಯಲ್​ನ ಸೊಸೆಯಂದಿರಾದ ಪೂರ್ಣಿ ಮತ್ತು ದೀಪಿಕಾ  

ದೀಪಿಕಾ ಮತ್ತು ಪೂರ್ಣಿ ಹೆಸರು ಕೇಳಿದರೆ ಸಾಕು, ಸೀರಿಯಲ್​ ಪ್ರಿಯರಿಗೆ ನೆನಪಾಗುವುದು ಶ್ರೀರಸ್ತು ಶುಭಮಸ್ತು ಸೀರಿಯಲ್​ನ ವಿಲನ್​ ಮತ್ತು ಮುಗ್ಧ ಸೊಸೆಯಂದಿರು. ಒಬ್ಬಳು ಮನೆಯಲ್ಲಿನ ಎಲ್ಲರಿಗೂ ಪ್ರೀತಿ ತೋರಿದರೆ, ಇನ್ನೊಬ್ಬಳು ಮನೆಯನ್ನು ಹಾಳು ಮಾಡುವ ಪ್ಲ್ಯಾನ್​ ಮಾಡುತ್ತಿದ್ದಾರೆ. ಅದರಲ್ಲಿ ಅವಳು ಬಹುತೇಕ ಯಶಸ್ವಿ ಕೂಡ ಆಗಿದ್ದಾಳೆ. ತನ್ನ ವಿಲನ್​ ಅತ್ತೆಯ ಸಹಕಾರದಿಂದ ಅಣ್ಣ-ತಮ್ಮಂದಿರಲ್ಲಿಯೇ ತಂದಿಟ್ಟು ಮಜ ನೋಡುತ್ತಿದ್ದಾರೆ. ಇವಳ ಮಾತು ಕೇಳಿದ ಪತಿರಾಯ ಮನೆಯಲ್ಲಿ ಆಸ್ತಿ ಕೇಳಿದ್ದೂ ಆಗಿದೆ. ಹೌದು. ಇದು ಸದ್ಯ ಶ್ರೀರಸ್ತು ಶುಭಮಸ್ತು ಕಥೆ. ಪೂರ್ಣಿ ಒಳ್ಳೆಯವಳಾಗಿದ್ದರೆ ದೀಪಿಕಾ ವಿಲನ್​. ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್​ನಲ್ಲಿ ಭಿನ್ನ ಕ್ಯಾರೆಕ್ಟರ್​. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್​. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು. 

ಇಂತಿಪ್ಪ ಸೊಸೆಯಂದಿರು ಒಟ್ಟುಗೂಡಿ ರೀಲ್ಸ್​ ಮಾಡಿದ್ದಾರೆ. ರಿಮ್​ ಝಿಮ್​ ರಿಮ್​ ಝಿಮ್​ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ. ಇಬ್ಬರೂ ಕೆಂಪು ಸೀರೆಯಲ್ಲಿ ಕಿಚ್ಚು ಹೊತ್ತಿಸುತ್ತಿದ್ದಾರೆ. ಇವರನ್ನು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅಷ್ಟಕ್ಕೂ ಪೂರ್ಣಿಯ ರಿಯಲ್​ ಹೆಸರು ಲಾವಣ್ಯ ಹಾಗೂ ದೀಪಿಕಾ ನಿಜವಾದ ಹೆಸರು ದರ್ಶಿನಿ ಡೆಲ್ಟಾ. ಇವರಿಬ್ಬರೂ ಸೇರಿ ರಾಮ್​ ಚರಣ್​ ಅವರ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಅಂದಹಾಗೆ ಪೂರ್ಣಿಯ ನಿಜವಾದ ಹೆಸರು ಲಾವಣ್ಯ. ಇವರ ರಿಯಲ್‌ ಪತಿಯ ಹೆಸರು ಶಶಿ. ಶಶಿ ಹಾಗೂ ಲಾವಣ್ಯ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಶಶಿ ಅವರು ಅಮೃತಧಾರೆ ಸೀರಿಯಲ್​ನಲ್ಲಿ ಭೂಮಿಕಾ ಸಹೋದರನ ಪಾತ್ರ ಮಾಡುತ್ತಿದ್ದಾರೆ. ರಿಯಾಲಿಟಿ ಷೋ ಒಂದರಲ್ಲಿ ಲಾವಣ್ಯ ಅವರ ಹುಟ್ಟಿನ ಬಗ್ಗೆ ಅಪ್ಪ ಹೇಳಿಕೊಂಡಿದ್ದರು. ಪತ್ನಿ ಗರ್ಭಿಣಿಯಾಗಿದ್ದಾಗ ಅಂದರೆ ಲಾವಣ್ಯ ಹೊಟ್ಟೆಯಲ್ಲಿ ಇದ್ದಾಗ ಆಗಿನ ಸ್ಥಿತಿಯಲ್ಲಿ ಮಗು ಹುಟ್ಟುವುದು ಬೇಡವಾಗಿತ್ತು. ಅದಕ್ಕಾಗಿ ಪರಂಗಿ ಕಾಯಿ ತಿನ್ನಬೇಕೆಂದು ಆರೇಳು ಕಿಲೋಮೀಟರ್‌ ಪರಂಗಿ ಕಾಯಿ ಹುಡುಕಿ ಹೊರಟಿದ್ದು, ಕೊನೆಗೆ ಅದು ಸಿಗದೇ ಇದ್ದುದ ಬಗ್ಗೆ ತಿಳಿಸಿದ್ದರು!

ಗಿಡ ನೆಟ್ಟು ಫೋಟೋ ಟ್ಯಾಗ್​ ಮಾಡಿ: ಜೀ ಕನ್ನಡದಿಂದ ಪರಿಸರ ಪ್ರೇಮಿಗಳಿಗೆ ಬಿಗ್​ ಆಫರ್​!


ಇನ್ನು ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಾಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಬಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.

ಓಪನ್ ದ ಬಾಟಲ್ ಹಾಡಿಗೆ ಪುನೀತ್ ರಾಜ್ ಕುಮಾರ್​ಗೆ ಜಾನಿ ಮಾಸ್ಟರ್ ಅವರಿಗೆ ಅಸಿಸ್ಟಂಟ್ ಕೊರಿಯೋಗ್ರಫಿ ಮಾಡಿದ ದರ್ಶಿನಿ, ನನ್ನ ಕೊರಿಯೋಗ್ರಫಿ ಮೇಲೆ ನನಗಿಂತ ಹೆಚ್ಚಿನ ನಂಬಿಕೆ ಇಟ್ಟಿದ್ದ ಪುನೀತ್ ರಾಜ್ ಕುಮಾರ್ (Punith Rajkumar) ಅವರ ಆಶೀರ್ವಾದದಿಂದಲೇ ನಾನು ಇವತ್ತು ಈ ಹಂತಕ್ಕೆ ಬಂದಿದ್ದೇನೆ ಎಂದು ಹೇಳ್ತಾರೆ. ಅಪ್ಪನ ಕನಸಿನಂತೆ ಡ್ಯಾನ್ಸರ್ (dancer) ಆಗಿ ಕರಿಯರ್ ಆರಂಭಿಸಿದ ದರ್ಶಿನಿ, ಮೊದಲಿಗೆ ತಮಿಳು ಮತ್ತು ತೆಲುಗು ರಿಯಾಲಿಟಿ ಶೋಗಳಲ್ಲಿ ಬಾಲ್ಯದಲ್ಲಿಯೇ ಭಾಗವಹಿಸಿದ್ದರು. ಕನ್ನಡದಲ್ಲಿ ನಟಿಯಾಗೋ ಮುನ್ನವೇ ಅವರು ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡರು. ಇದೀಗ ಕನ್ನಡ, ತೆಲುಗಿನ ಸೂಪರ್ ಸ್ಟಾರ್ ನಾಯಕರಿಗೆ ಅಂದರೆ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್, ಶರಣ್, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿಯಂತಹ ಮಹಾನ್ ನಟರಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ತಮಿಳಿನಲ್ಲಿ ಜಾನಿ ಮಾಸ್ಟರ್ (Jani Master) ಅವರಿಗೆ ಅಸಿಸ್ಟಂಟ್ ಆಗಿ ಪ್ರಭುದೇವ (Prabhudeva) ಅವರಿಗೆ ಕೊರಿಯೋಗ್ರಫಿ ಮಾಡಿದ ದರ್ಶಿನಿ ಡೆಲ್ಟಾ ನಾಗರಾಜ್, ಸದ್ಯ ಕನ್ನಡದ ಮೊದಲ ಡ್ಯಾನ್ಸ್ ಕೊರಿಯೋಗ್ರಫರ್ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ನಮ್ಮನೆಯಲ್ಲೂ ಇಂಥ ಮನೆಹಾಳಿ ದೀಪಿಕಾ ಇದ್ದಾಳೆ: ಸೀರಿಯಲ್​ ನೋಡಿ ನೋವು ತೋಡಿಕೊಳ್ತಿರೋ ನೆಟ್ಟಿಗರು!

View post on Instagram