ಗಂಡಿನಿಂದ ಸಪರೇಟ್ ಆಗಿದ್ದ ಪುಟ್ಟಕ್ಕನ ಮಕ್ಕಳು ರಾಜಿ! ರಿಯಲ್ ಸ್ಟೋರಿ ಹೇಳಿ ಕಣ್ಣೀರಾದ ಹಂಸ ಪ್ರತಾಪ್...
ಪುಟ್ಟಕ್ಕನ ಮಕ್ಕಳು ಸೀರಿಯಲ್ನಲ್ಲಿ ವಿಲನ್ ರಾಜಿ ಪಾತ್ರಧಾರಿ ಹಂಸ ಪ್ರತಾಪ್ ಅವರು ಪತಿ ಜೊತೆ ರಾಜಾ ರಾಣಿ ಷೋನಲ್ಲಿ ಕಾಣಿಸಿಕೊಂಡಿದ್ದು, ರಿಯಲ್ ಲೈಫ್ ಸ್ಟೋರಿ ಹೇಳಿದ್ದಾರೆ.
ರಾಜಿ ಉರ್ಫ್ ರಾಜೇಶ್ವರಿ ಎಂದಾಕ್ಷಣ ಧಾರಾವಾಹಿ ಪ್ರಿಯರ ಕಣ್ಣಮುಂದೆ ಪುಟ್ಟಕ್ಕನ ಮಕ್ಕಳ ಧಾರಾವಾಹಿಯ ವಿಲನ್. ರಾಜೇಶ್ವರಿ ಎಂದಾಕ್ಷಣ ಈ ಪಾತ್ರವೇ ಹಾದುಹೋಗುವಷ್ಟರ ಮಟ್ಟಿಗೆ ರಾಜಿ (Rajeshwari) ಪಾತ್ರ ಜೀವ ತುಂಬಿದೆ. ಗಂಡ ಇಲ್ಲದಿದ್ದರೂ ಕ್ಷಣ ಕ್ಷಣಕ್ಕೂ ನೋವನ್ನೇ ಪುಟ್ಟಕ್ಕ ಅನುಭವಿಸುತ್ತಿದ್ದರೂ ಅವರ ಮನೆಯ ಸಮೀಪವೇ ಇದ್ದು, ಕ್ಷಣ ಕ್ಷಣಕ್ಕೂ ಆಕೆಗೆ ತೊಂದರೆ ಕೊಡುವಲ್ಲಿ ಈ ಸವತಿ ರಾಜೇಶ್ವರಿಯದ್ದು ಎತ್ತಿದ ಕೈ. ಪುಟ್ಟಕ್ಕನ ಪತಿಯನ್ನು ಬುಟ್ಟಿಗೆ ಹಾಕಿಕೊಂಡು ಮದುವೆಯಾದರೂ ಪುಟ್ಟಕ್ಕನಿಗೆ ತೊಂದರೆ ಕೊಡುವುದು ಎಂದರೆ ಈಕೆಗೆ ಅದೇನೋ ಖುಷಿ. ರಾಜೇಶ್ವರಿ ಬಂದರೆ ಅದೆಷ್ಟೋ ಮನೆಯಲ್ಲಿ ಆಕೆಗೆ ಹಿಡಿಶಾಪ ಹಾಕುವುದೂ ಇದೆ. ಥೇಟ್ ವಿಲನ್ನಂತೆ ಪಾತ್ರ ಮಾಡಿ ಆ ಪಾತ್ರಕ್ಕೆ ಜೀವ ತುಂಬುತ್ತಿರುವ ಈ ರಾಜೇಶ್ವರಿಯವರ ನಿಜವಾದ ಹೆಸರು ಹಂಸ ನಾರಾಯಣಸ್ವಾಮಿ @ ಹಂಸ ಪ್ರತಾಪ್ (Hamsa Pratap).
ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ರಾಜಾ ರಾಣಿ ರೀಲೋಡೆಡ್ ಗ್ರ್ಯಾಂಡ್ ಓಪನಿಂಗ್ನಲ್ಲಿ, ಹಂಸ ಅವರು ಪತಿ ಪ್ರತಾಪ್ ಜೊತೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಭರ್ಜರಿ ಡ್ಯಾನ್ಸ್ ಕೂಡ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮ ಲೈಫ್ ಸ್ಟೋರಿಯನ್ನು ಹಂಸ ಹೇಳಿಕೊಂಡಿದ್ದಾರೆ. ಮದುವೆಯಾದಾಗ ನಮ್ಮಿಬ್ಬರ ನಡುವೆ ತುಂಬಾ ಡಿಫರೆನ್ಸ್ ಇತ್ತು. ಬೇರೆ ಕಪಲ್ಗಳನ್ನು ನೋಡಿದಾಗ ನಾವ್ಯಾಕೆ ಹೀಗೆ ಇರ್ಲಿಲ್ಲ ಅಂತ ಅಂದ್ಕೊಂಡಿದ್ವಿ. ನಿಜ ಹೇಳಬೇಕು ಎಂದ್ರೆ ಇಬ್ರೂ ಸಪರೇಟ್ ಕೂಡ ಆದ್ವಿ. ಆದರೆ ಆ ದೇವರ ದಯೆಯಿಂದ ಮತ್ತೆ ಒಂದಾದ್ವಿ ಎಂದು ಸ್ಟೋರಿ ಹೇಳಿಕೊಂಡಿದ್ದಾರೆ. ಆಗ ಪ್ರತಾಪ್ ಅವರು ಪತ್ನಿಯನ್ನು ಸಂತೈಸಿ ಇನ್ನು ಸದಾ ಒಟ್ಟಿಗೇ ಇರೋಣ, ಏನೂ ಆಗಲ್ಲ ಎಂದಿದ್ದಾರೆ.
ಸುಲಭದ ಪ್ರಶ್ನೆಗೂ ಉತ್ತರಿಸಲಾಗದೇ ಪೇಚಿಗೆ ಸಿಲುಕಿದ ರಾಮ್ - 'ಅಯ್ಯೋ ರಾಮ' ಅಂದ ನೆಟ್ಟಿಗರು
ಇನ್ನು ಹಂಸ ಅವರ ಕುರಿತು ಹೇಳುವುದಾದರೆ, ಅವರು ಈ ಹಿಂದೆ, ಧ್ರುವ, ಅಮ್ಮ, ರಾಜಾಹುಲಿ, ಸಖತ್, ಜೇಮ್ಸ್, ಉಂಡೆನಾಮ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ರಿಯಾಲಿಟಿ ಷೋಗಳಲ್ಲಿಯೂ ಭಾಗಿಯಾಗಿದ್ದಾರೆ. ಹಂಸ ಅವರು ಕೆಲವೊಮ್ಮೆ ತಮ್ಮ ಪತಿ ಹಾಗೂ ಹಲವು ಬಾರಿ ಪುಟ್ಟಕ್ಕನ ಮಕ್ಕಳು ಸೀರಿಯಲ್ನಲ್ಲಿ ತಮ್ಮನ ಪಾತ್ರದಲ್ಲಿ ನಟಿಸ್ತಿರೋ ಕಾಳಿಯ ಜೊತೆ ರೀಲ್ಸ್ ಮಾಡುತ್ತಾರೆ.
ಅಂದಹಾಗೆ ಹಂಸ ಅವರು, ನಟಿ, ಅನೇಕ ಆ್ಯಂಗಲ್ಗಳಲ್ಲಿ, ಬಗೆಬಗೆಯ ಡ್ರೆಸ್ ತೊಟ್ಟು ಹಂಸ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಲೇ ಇದ್ದಾರೆ. ಇಂದು ಕೂಡ ಹಲವಾರು ರೀತಿಯ ಡ್ರೆಸ್ಗಳಲ್ಲಿ ಅವರು ಫೋಟೋಶೂಟ್ (Photoshoot) ಮಾಡಿಸಿಕೊಂಡು ಅದನ್ನು ಶೇರ್ ಮಾಡಿಕೊಡುತ್ತಿರುತ್ತಾರೆ. ರೆಡ್ ಬ್ಲೇಜರ್ ತೊಟ್ಟು, ಬ್ಲಾಕ್ ಕಲರ್ ಸೂಟ್, ಮಿಡಿ, ಮಿನಿ, ಫ್ರಾಕ್, ಸಲ್ವಾರ್, ಸೀರೆ... ಹೀಗೆ ವಿಭಿನ್ನ ಉಡುಗೆ ತೊಟ್ಟು ಅವರು ಫೋಟೋಶೂಟ್ ಮಾಡಿಸಿಕೊಂಡಿದ್ದು ಅದರ ಫೋಟೋ ಶೇರ್ ಮಾಡುತ್ತಿರುತ್ತಾರೆ. . ಈ ಫೋಟೋಗಳಿಗೆ ಸಕತ್ ಕಮೆಂಟ್ಗಳ ಸುರಿಮಳೆಯಾಗುತ್ತಿರುತ್ತದೆ. ಅಂದಹಾಗೆ ಹಂಸ ಅವರಿಗೆ ಓರ್ವ ಮಗನಿದ್ದಾನೆ.
ಮನಸು ಮನಸುಗಳ ಸಮ್ಮಿಲನ ಅಲ್ಲಿ ಸಾಕು... ಇಲ್ಲೂ ಹಾಗೇ ಬೇಕೆಂದ್ರೆ ಹೇಗೆ- ದೇಹಗಳ ಮಿಲನವೂ ಬೇಕಲ್ವಾ?