ಪುಷ್ಪಾ-2 ಹಾಡಿಗೆ ಸೀತಾ-ರಾಮ ಭರ್ಜರಿ ರೀಲ್ಸ್ ಮಾಡಿದ್ರೆ ಜೋಡಿಯ ನೋಡಿ ಪುನಃ ಮದ್ವೆ ವಿಷಯ ಕೆದಕೋದಾ ಅಭಿಮಾನಿಗಳು?  

ಸೀತಾರಾಮ ಸೀರಿಯಲ್​ನಲ್ಲಿ ಸೀತಾ ಮತ್ತು ರಾಮನ ನಿಶ್ಚಿತಾರ್ಥದ ಸಂಭ್ರಮ ಜೋರಾಗಿಯೇ ನಡೆದಿದ್ದು ಇನ್ನೇನು ಮದುವೆಗೆ ಕ್ಷಣಗಣನೆ ಶುರುವಾಗಿದೆ. ರಿಯಲ್​ ಎಂಗೇಜ್​ಮೆಂಟ್​ನಂತೆಯೇ ರೀಲ್​ ಎಂಗೇಜ್​ಮೆಂಟ್​ ಕೂಡ ನಡೆದಿದ್ದು, ಇದು ರೀಲೋ ರಿಯಲ್ಲೋ ಎನ್ನುವಷ್ಟರ ಮಟ್ಟಿಗೆ ಫ್ಯಾನ್ಸ್​ ಕನ್​ಫ್ಯೂಸ್​ ಆಗಿದ್ದರು. ನಿಜ ಜೀವನದಲ್ಲಿ ನಡೆಯುವಂತೆಯೇ ಭರ್ಜರಿ ಸೆಟ್‌ ಹಾಕಲಾಗಿತ್ತು. ಇದೀಗ ಈ ಭಾರಿ ದಂಪತಿ ತಮ್ಮ ಕ್ಯೂಟ್​ ಮಗಳು ಸಿಹಿಯ ಜೊತೆ ಸಂಭ್ರಮದಲ್ಲಿದ್ದಾರೆ. ಇವರಿಬ್ಬರ ಮದುವೆ ಯಾವುದೇ ಆತಂಕವಿಲ್ಲದೇ ನಡೆಯಲಿ ಎನ್ನುತ್ತಿದ್ದಾರೆ ಸೀರಿಯಲ್​ ಪ್ರಿಯರು. ಈ ಸಂಭ್ರಮ ಒಂದೆಡೆಯಾದರೆ, ಅದೇ ಸಮಯದಲ್ಲಿ ಸೀತಾ ಪಾತ್ರಧಾರಿ ವೈಷ್ಣವಿ ಗೌಡ ಅವರು ತಮ್ಮ ಸೋಷಿಯಲ್​ ಮೀಡಿಯಾದಲ್ಲಿಯೂ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ್ಗೆ ಒಂಟಿಯಾಗಿ ಇಲ್ಲವೇ ಸೀತಾರಾಮ ಟೀಂನ ಪಾತ್ರಧಾರಿಗಳ ಜೊತೆ ವಿವಿಧ ರೀತಿಯ ವಿಡಿಯೋಗಳನ್ನು ಶೇರ್‌ ಮಾಡಿಕೊಳ್ಳುತ್ತಾರೆ.

ಇದೀಗ ಪುಷ್ಪಾ-2 ಸಿನಿಮಾದ ಸೂಸೇಕಿ ಹಾಡಿಗೆ ಸೀತಾ ಮತ್ತು ರಾಮ್​ ಭರ್ಜರಿ ರೀಲ್ಸ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಮನಸೋತಿದ್ದಾರೆ. ಸೀತಾ ಪಾತ್ರಧಾರಿಯಾಗಿರುವ ವೈಷ್ಣವಿ ಗೌಡ ಹಾಗೂ ರಾಮ್​ ಪಾತ್ರಧಾರಿ ಗಗನ್​ ಚಂಗಪ್ಪ ಇದಕ್ಕೆ ರೀಲ್ಸ್​ ಮಾಡಿದ್ದು, ನಿಮ್ಮ ಜೋಡಿ ಸೂಪರ್​ ಎಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಮತ್ತೆ ಮತ್ತೆ ಇಬ್ಬರೂ ಒಂದಾಗಿ ಎನ್ನುವುದು ಅಭಿಮಾನಿಗಳ ಮಾತು. ರಿಯಲ್​ನಲ್ಲಿಯೂ ಇಬ್ಬರೂ ಮದ್ವೆಯಾಗಿ ಅನ್ನುತ್ತಲೇ ಇದ್ದಾರೆ. ಯಾವುದೇ ಸೀರಿಯಲ್​ನಲ್ಲಿ ನಾಯಕ-ನಾಯಕಿ ಪಾತ್ರ ಸೂಪರ್​ ಹಿಟ್ ಆಯಿತು ಎಂದರೆ, ಅವರಿಬ್ಬರೂ ಮದ್ವೆಯಾಗಿ ಎಂದು ಹೇಳುವವರೇ ಹೆಚ್ಚು. ಸೀತಾ ಮತ್ತು ರಾಮ್​ ಪಾತ್ರಧಾರಿಗಳಿಗೂ ಇದಾಗಲೇ ಹಲವಾರು ಬಾರಿ ಮದ್ವೆಯಾಗಿ ಮದ್ವೆಯಾಗಿ ಅಂತಿದ್ದಾರೆ. ಈ ರೀಲ್ಸ್​ ನೋಡಿಯೂ ಅದೇ ವಿಷ್ಯವನ್ನು ಮತ್ತೆ ಅಭಿಮಾನಿಗಳು ಕೆದಕುತ್ತಿದ್ದಾರೆ. 

ಬಿಂಕದ ಸಿಂಗಾರಿ... ಡಾ.ರಾಜ್​ ಹಾಡಿಗೆ ಸೀತಾ-ರಾಮ ಮಾಡರ್ನ್​ ಸ್ಟೆಪ್​: ಮನಸೋತ ಅಭಿಮಾನಿಗಳು

ಇನ್ನು ಸೀತಾ ಪಾತ್ರಧಾರಿ ವೈಷ್ಣವಿ ಅವರ ಕುರಿತು ಹೇಳುವುದಾದರೆ, ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಇವರು ಪರಿಚಯವಿದ್ದರು. ಅಗ್ನಿಸಾಕ್ಷಿ ಸೀರಿಯಲ್​ನ ಸನ್ನಿಧಿ ಮೂಲಕ ಸಕತ್​ ಫೇಮಸ್​ ಆಗಿದ್ದ ನಟಿ ಈಗ ಸೀತಾರಾಮದ ಸೀತೆಯಾಗಿ ಮನೆ ಮಾತಾಗಿದ್ದಾರೆ. ವೈಷ್ಣವಿ ಉತ್ಪನ್ನಗಳ ರಾಯಭಾರಿಯೂ ಹೌದು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದಿದ್ದಾರೆ. ಭರತನಾಟ್ಯ, ಕುಚಿಪುಡಿ ಮತ್ತು ಬೆಲ್ಲಿ ಡ್ಯಾನ್ಸಿಂಗ್‌ನಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. `ಗಿರಿಗಿಟ್ಲೆ' ಚಿತ್ರದ ಮೂಲಕ ನಾಯಕಿಯಾಗಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಷೋ ನಿರೂಪಣೆ ಕೂಡ ಮಾಡಿದ್ದಾರೆ. `ಕುಣಿಯೋಣ ಬಾರ' ಡ್ಯಾನ್ಸ್ ರಿಯಾಲಿಟಿ ಷೋ ಆಗೂ ಬಿಗ್​ಬಾಸ್​ ಸೀಸನ್​ 8ನಲ್ಲಿ ಭಾಗವಹಿಸಿದ್ದಾರೆ.

ಇನ್ನು ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ ಕುರಿತು ಹೇಳುವುದಾದರೆ, ಕೊಡಗು ಮೂಲದ ಗಗನ್​, ಬಣ್ಣ ಲೋಕಕ್ಕೆ ಎಂಟ್ರಿ ಕೊಡುವ ಮೊದಲದು ಎರಡು ವರ್ಷ ಓಮನ್‌ ದೇಶದಲ್ಲಿ ಅದಾದ ಬಳಿಕ ಒಂದು ವರ್ಷ ಅಬುದಾಬಿಯಲ್ಲಿ ಕೆಲಸ ಮಾಡಿದ್ದರು. ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದ್ದವರು. ಬಣ್ಣದ ಲೋಕದ ಸೆಳೆತದಿಂದ ಅಬುದಾಬಿ ಬಿಟ್ಟು ಬೆಂಗಳೂರಿಗೆ ಬಂದರು. ಚಿತ್ರದಲ್ಲಿ ನಟಿಸಿದರೂ ಅದು ರಿಲೀಸ್​ ಆಗಲೇ ಇಲ್ಲ. ಸೀರಿಯಲ್​ಗಳಲ್ಲಿ ಆಡಿಷನ್​ ಕೊಟ್ಟರೂ ಭಾಷೆ ಸರಿಯಿಲ್ಲವೆಂದು ರಿಜೆಕ್ಟ್​​ ಆಗುತ್ತಿದ್ದಂತೆ. ನಂತರ ಬಣ್ಣದ ಲೋಕ ಬೇಡ ಎಂದು ಮಾರ್ಕೆಟಿಂಗ್‌ ಮ್ಯಾನೇಜರ್‌ ಆಗಿ ಕೆಲಸ ಶುರು ಮಾಡಿದರು. ಮಂಗಳಗೌರಿ ಮದುವೆ ಸೀರಿಯಲ್‌ನಲ್ಲಿ ಅವಕಾಶ ಸಿಕ್ಕಿತು. ಈ ಧಾರಾವಾಹಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮಿನಿ ಬಿಗ್ ಬಾಸ್​ಗೂ ಎಂಟ್ರಿ ಕೊಟ್ಟು ಈಗ ಸೀತಾರಾಮ ಸೀರಿಯಲ್​ ಮೂಲಕ ಕನ್ನಡ ಧಾರಾವಾಹಿ ಲೋಕದಲ್ಲಿ ಪೂರ್ಣಪ್ರಮಾಣದ ನಾಯಕರಾಗಿ ಮಿಂಚುತ್ತಿದ್ದಾರೆ. ತೆಲುಗು ಕಿರುತೆರೆಗೂ ಕಾಲಿಟ್ಟಿರೋ ಗಗನ್​ ಅವರು, ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವವರು ಮುರಾರಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಪ್ರೇರಣಾ ಕಂಬಮ್, ಯಶ್ಮಿ ಗೌಡ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಮನೋಕಾಮನೆ ಈಡೇರಬೇಕೆಂದರೆ 3,6,9ರ ಟಿಪ್ಸ್​ ಫಾಲೋ ಮಾಡಿ: ಸೀತಾರಾಮ ವೈಷ್ಣವಿ ಗೌಡ ಸಲಹೆ

View post on Instagram