ಬಿಂಕದ ಸಿಂಗಾರಿ ಎಂದ ಶ್ರೀರಸ್ತು ಶುಭಮಸ್ತು ಸೊಸೆಯಂದಿರು: ಅಲ್ಲೂ ಹೀಗೆ ಇರೋಕೆ ಏನಾಗತ್ತೆ ಕೇಳಿದ ಫ್ಯಾನ್ಸ್...
ಬಿಂಕದ ಸಿಂಗಾರಿ ಹಾಡಿಗೆ ಶ್ರೀರಸ್ತು ಶುಭಮಸ್ತು ಸೊಸೆಯಂದಿರು ಭರ್ಜರಿ ರೀಲ್ಸ್ ಮಾಡಿದ್ದಾರೆ. ಅಭಿಮಾನಿಗಳು ಏನಂದ್ರು ನೋಡಿ...
ಶ್ರೀರಸ್ತು ಶುಭಮಸ್ತು ಸೀರಿಯಲ್ನ ಇಬ್ಬರು ಸೊಸೆಯಂದಿರೆಂದರೆ ಪೂರ್ಣಿ ಮತ್ತು ದೀಪಿಕಾ. ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್ನಲ್ಲಿ ಭಿನ್ನ ಕ್ಯಾರೆಕ್ಟರ್. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು. ಇಂತಿಪ್ಪ ಸೊಸೆಯಂದಿರು ಒಟ್ಟುಗೂಡಿ ರೀಲ್ಸ್ ಮಾಡಿದ್ದಾರೆ. ಇದಕ್ಕೆ ಥಹರೇವಾರಿ ಕಮೆಂಟ್ಸ್ ಸುರಿಮಳೆಯಾಗಿದೆ.
ಅಷ್ಟಕ್ಕೂ ಪೂರ್ಣಿಯ ರಿಯಲ್ ಹೆಸರು ಲಾವಣ್ಯ ಹಾಗೂ ದೀಪಿಕಾ ನಿಜವಾದ ಹೆಸರು ದರ್ಶಿನಿ ಡೆಲ್ಟಾ. ಇವರಿಬ್ಬರೂ ಸೇರಿ ಬಿಂಕದ ಸಿಂಗಾರಿ, ಮೈ ಡೊಂಕಿನ ವೈಯಾರಿ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಇಷ್ಟು ಚೆನ್ನಾಗಿ ಇಲ್ಲಿ ಒಟ್ಟಿಗೇ ಇರುವ ನೀವು ಸೀರಿಯಲ್ನಲ್ಲಿಯೂ ಚೆನ್ನಾಗಿ ಇರಬಾರದಾ ಎಂದು ಕೇಳುತ್ತಿದ್ದಾರೆ. ಅವರು ಚೆನ್ನಾಗಿದ್ದರೆ ಸೀರಿಯಲ್ ಓಡೋದು ಹೇಗೆ ಎಂದು ಇನ್ನು ಹಲವರು ಪ್ರಶ್ನಿಸುತ್ತಿದ್ದಾರೆ. ಇನ್ನು ಈ ಇಬ್ಬರು ನಟಿಯರ ಕುರಿತು ಹೇಳುವುದಾದರೆ, ಹೊಸದಾಗಿ ಮದುವೆಯಾಗಿ ಬಂದ ಅತ್ತೆ ತುಳಸಿಗೆ ಪೂರ್ಣಿ ತೋರುವ ಪ್ರೀತಿಗೆ ಪ್ರೇಕ್ಷಕರು ತಲೆದೂಗಿದ್ದಾರೆ. ಇದ್ದರೆ ಇಂಥ ಸೊಸೆ ಇರಬೇಕು ಎನ್ನುತ್ತಿದ್ದಾರೆ. ಸದಾ ಗಂಭೀರವಾಗಿ, ಗಂಟು ಮುಖ ಮಾಡಿಕೊಂಡಿರುವ ಪತಿ ಅವಿಯನ್ನೂ ಬದಲಿಸಿ, ಆತನಲ್ಲಿ ಪ್ರೇಮದ ಧಾರೆಯನ್ನೇ ಸುರಿಸಿದ್ದಾಳೆ ಪೂರ್ಣಿ.
ಅಲ್ಲಿ ಡ್ರೈವರ್, ಇಲ್ಲಿ ಡೆಲವರಿ ಬಾಯ್: ಕೆಲಸ ಕಳಕೊಂಡವರಿಗೆ ಸೀರಿಯಲ್ಗಳು ಹುರಿದುಂಬಿಸಲಿ ಅಂತಿದ್ದಾರೆ ಫ್ಯಾನ್ಸ್
ಅಂದಹಾಗೆ ಪೂರ್ಣಿಯ ನಿಜವಾದ ಹೆಸರು ಲಾವಣ್ಯ. ಇವರ ರಿಯಲ್ ಪತಿಯ ಹೆಸರು ಶಶಿ. ಶಶಿ ಹಾಗೂ ಲಾವಣ್ಯ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಶಶಿ ಅವರು ಅಮೃತಧಾರೆ ಸೀರಿಯಲ್ನಲ್ಲಿ ಭೂಮಿಕಾ ಸಹೋದರನ ಪಾತ್ರ ಮಾಡುತ್ತಿದ್ದಾರೆ. ರಿಯಾಲಿಟಿ ಷೋ ಒಂದರಲ್ಲಿ ಲಾವಣ್ಯ ಅವರ ಹುಟ್ಟಿನ ಬಗ್ಗೆ ಅಪ್ಪ ಹೇಳಿಕೊಂಡಿದ್ದರು. ಪತ್ನಿ ಗರ್ಭಿಣಿಯಾಗಿದ್ದಾಗ ಅಂದರೆ ಲಾವಣ್ಯ ಹೊಟ್ಟೆಯಲ್ಲಿ ಇದ್ದಾಗ ಆಗಿನ ಸ್ಥಿತಿಯಲ್ಲಿ ಮಗು ಹುಟ್ಟುವುದು ಬೇಡವಾಗಿತ್ತು. ಅದಕ್ಕಾಗಿ ಪರಂಗಿ ಕಾಯಿ ತಿನ್ನಬೇಕೆಂದು ಆರೇಳು ಕಿಲೋಮೀಟರ್ ಪರಂಗಿ ಕಾಯಿ ಹುಡುಕಿ ಹೊರಟಿದ್ದು, ಕೊನೆಗೆ ಅದು ಸಿಗದೇ ಇದ್ದುದ ಬಗ್ಗೆ ತಿಳಿಸಿದ್ದರು! ಇದೇ ವೇಳೆ, ಶಶಿ-ಲಾವಣ್ಯ ಜೋಡಿ ತಮ್ಮ ಹಲವು ಪರ್ಸನಲ್ ವಿಷಯಗಳನ್ನು ಶೇರ್ ಮಾಡಿಕೊಂಡಿತ್ತು. ಮದುವೆ ಮತ್ತು ಫಸ್ಟ್ನೈಟ್ ಬಗ್ಗೆ ಶಶಿ ಅವರು ಮಾತನಾಡಿದ್ದರು. ಫಸ್ಟ್ ನೈಟ್‌ನಲ್ಲಿ ಈಕೆಯ ಕಸಿನ್ಸ್ ನನ್ನನ್ನು ಅಡ್ಡಗಟ್ಟಿ ಒಳಗೆ ಹೆಂಡತಿಯನ್ನ ಬಿಡಬೇಕೆಂದರೆ ಒಬ್ಬೊಬ್ಬರಿಗೆ 4 ಸಾವಿರ ಕೊಡಬೇಕು ಅಂತ ಕೇಳಿದ್ದರು, ಆಮೇಲೆ ಸೆಟಲ್‌ಮೆಂಟ್ ಮಾಡಿಕೊಂಡಿದ್ದರು. ನಾನು ಒಳಗೆ ಹೋದ್ಮೇಲೆ ಅಲ್ಲಿ ಬೆಡ್ ಬದಲು ಥರ್ಮೊಕಾಲ್ ಬಬಲ್ಸ್ ಹಾಕಿದ್ದರು. ಕೂತಾಗ ಬಬಲ್ಸ್ ಹಾರಿಬಿಡ್ತು. ಮಧ್ಯರಾತ್ರಿ 3 ಗಂಟೆವರೆಗೂ ಅದನ್ನೆಲ್ಲಾ ಕ್ಲೀನ್ ಮಾಡ್ತಿದ್ವಿ ಎಂದು ನೆನಪಿಸಿಕೊಂಡಿದ್ದರು. ಅದೇ ರೀತಿ ಹನಿಮೂನ್‌ಗೆ ಮಾಲ್ದೀವ್ಸ್ ಹೋಗುವ ಕನಸನ್ನು ಇನ್ನೂ ಪತಿ ನೆರವೇರಿಸಿಲ್ಲ ಎಂದು ಲಾವಣ್ಯ ವೇದಿಕೆಯ ಮೇಲೆ ಬೇಸರ ವ್ಯಕ್ತಪಡಿಸಿದ್ದರು.
ಇನ್ನು ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಾಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.
ಸತ್ತೆನೆಂದು ಸುದ್ದಿ ಮಾಡಿದ ಬಳಿಕ ಈ ಅವತಾರದಲ್ಲಿ ಕಾಣಿಸಿಕೊಂಡ ಪೂನಂ ಪಾಂಡೆ: ವಿಡಿಯೋ ನೋಡಿ ತರಾಟೆ
ಓಪನ್ ದ ಬಾಟಲ್ ಹಾಡಿಗೆ ಪುನೀತ್ ರಾಜ್ ಕುಮಾರ್ ಗೆ ಜಾನಿ ಮಾಸ್ಟರ್ ಗೆ ಅಸಿಸ್ಟಂಟ್ ಕೊರಿಯೋಗ್ರಫಿ ಮಾಡಿದ ದರ್ಶಿನಿ, ನನ್ನ ಕೊರಿಯೋಗ್ರಫಿ ಮೇಲೆ ನನಗಿಂತ ಹೆಚ್ಚಿನ ನಂಬಿಕೆ ಇಟ್ಟಿದ್ದ ಪುನೀತ್ ರಾಜ್ ಕುಮಾರ್ (Punith Rajkumar) ಅವರ ಆಶೀರ್ವಾದದಿಂದಲೇ ನಾನು ಇವತ್ತು ಈ ಹಂತಕ್ಕೆ ಬಂದಿದ್ದೇನೆ ಎಂದು ಹೇಳ್ತಾರೆ. ಅಪ್ಪನ ಕನಸಿನಂತೆ ಡ್ಯಾನ್ಸರ್ (dancer) ಆಗಿ ಕರಿಯರ್ ಆರಂಭಿಸಿದ ದರ್ಶಿನಿ, ಮೊದಲಿಗೆ ತಮಿಳು ಮತ್ತು ತೆಲುಗು ರಿಯಾಲಿಟಿ ಶೋಗಳಲ್ಲಿ ಬಾಲ್ಯದಲ್ಲಿಯೇ ಭಾಗವಹಿಸಿದ್ದರು. ಕನ್ನಡದಲ್ಲಿ ನಟಿಯಾಗೋ ಮುನ್ನವೇ ಅವರು ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡರು. ಇದೀಗ ಕನ್ನಡ, ತೆಲುಗಿನ ಸೂಪರ್ ಸ್ಟಾರ್ ನಾಯಕರಿಗೆ ಅಂದರೆ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್, ಶರಣ್, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿಯಂತಹ ಮಹಾನ್ ನಟರಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ತಮಿಳಿನಲ್ಲಿ ಜಾನಿ ಮಾಸ್ಟರ್ (Jani Master) ಅವರಿಗೆ ಅಸಿಸ್ಟಂಟ್ ಆಗಿ ಪ್ರಭುದೇವ (Prabhudeva) ಅವರಿಗೆ ಕೊರಿಯೋಗ್ರಫಿ ಮಾಡಿದ ದರ್ಶಿನಿ ಡೆಲ್ಟಾ ನಾಗರಾಜ್, ಸದ್ಯ ಕನ್ನಡದ ಮೊದಲ ಡ್ಯಾನ್ಸ್ ಕೊರಿಯೋಗ್ರಫರ್ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.