ಶ್ರೀರಸ್ತು ಶುಭಮಸ್ತುವಿನಲ್ಲಿ ಸದಾ ಕಿತ್ತಾಡುತ್ತಿರುವ ಸೊಸೆಯಂದಿರಾದ ಪೂರ್ಣಿ- ದೀಪಿಕಾ ಭರ್ಜರಿ ರೀಲ್ಸ್ ಮಾಡಿದ್ದಾರೆ. ಅಭಿಮಾನಿಗಳು ಏನಂದ್ರು ನೋಡಿ... 

ಶ್ರೀರಸ್ತು ಶುಭಮಸ್ತುವಿನಲ್ಲಿ ಅತ್ತೆ ತುಳಸಿ ಮತ್ತೊಮ್ಮ ಗರ್ಭಿಣಿಯಾಗಿದ್ದಾಳೆ. ಇತ್ತ ಸೊಸೆ ಪೂರ್ಣಿಗೆ ಮಕ್ಕಳಾಗೋದ ಡೌಟ್​ ಎಂದಿದ್ದಾರೆ ವೈದ್ಯರು. ಇನ್ನು ತನ್ನ ಪತಿ ಅಭಿ, ತುಳಸಿಯ ಪರ ವಾಲುತ್ತಿರುವುದರಿಂದ ದೀಪಿಕಾ ಕೊತಕೊತ ಕುದಿಯುತ್ತಿದ್ದಾಳೆ. ತುಳಸಿ ಗರ್ಭಿಣಿಯಾಗಿರೋ ಸುದ್ದಿ ಮಾಧವ್​ಗೆ ಬಿಟ್ಟು ಯಾರಿಗೂ ಗೊತ್ತಿಲ್ಲ. ಇದರ ನಡುವೆಯೇ, ವಾರೆಗಿತ್ತಿಯರಾದ ಪೂರ್ಣಿ ಮತ್ತು ದೀಪಿಕಾ ಭರ್ಜರಿ ರೀಲ್ಸ್​ ಮಾಡಿದ್ದು, ನೆಟ್ಟಿಗರ ಶಹಬ್ಬಾಸ್​ಗಿರಿ ಗಿಟ್ಟಿಸಿಕೊಂಡಿದ್ದಾರೆ. ಇವರಿಬ್ಬರ ಡಾನ್ಸ್​ಗೆ ಸಕತ್​ ಕಮೆಂಟ್ಸ್​ ಕೂಡ ಬರುತ್ತಿವೆ. ಅಷ್ಟಕ್ಕೂ ಇವರಿಬ್ಬರೂ ಸೀರಿಯಲ್​ನಲ್ಲಿ ಸದಾ ಕಿತ್ತಾಡುತ್ತಿರುವ ಕಾರಣದಿಂದ ಅಲ್ಲಿ ಕಿತ್ತಾಡಿಕೊಂಡು ಇಲ್ಲಿ ಕುಣಿಯುತ್ತಿದ್ದೀರಾ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ತುಳಸಿ ಅತ್ತೆ ಗರ್ಭಿಣಿಯಾಗಿರೋ ಖುಷಿಗೆ ಡಾನ್ಸಾ ಎಂದೂ ಪ್ರಶ್ನಿಸುತ್ತಿದ್ದಾರೆ! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ಅಷ್ಟಕ್ಕೂ, ಈ ಸೀರಿಯಲ್​ನಲ್ಲಿ ಒಂದೇ ಮನೆಯ ಸೊಸೆಯಂದಿರಾಗಿರುವವರು ಪೂರ್ಣಿ ಮತ್ತು ದೀಪಿಕಾ. ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್​ನಲ್ಲಿ ಭಿನ್ನ ಕ್ಯಾರೆಕ್ಟರ್​. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್​. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು. ಇಂತಿಪ್ಪ ಸೊಸೆಯಂದಿರು ಒಟ್ಟುಗೂಡಿ ರೀಲ್ಸ್​ ಮಾಡಿದ್ದರಿಂದ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. 

ಬದಲಾಗ್ತಿರೋ ಭಾಗ್ಯಳ ಜೊತೆ ಬದಲಾಯ್ತು ಟೈಟಲ್​ ಕಾರ್ಡ್​: ಏನಿದು ಭಾಗ್ಯಲಕ್ಷ್ಮಿ ಟ್ವಿಸ್ಟ್​?

ಪೂರ್ಣಿಯ ರಿಯಲ್​ ಹೆಸರು ಲಾವಣ್ಯ ಹಾಗೂ ದೀಪಿಕಾ ನಿಜವಾದ ಹೆಸರು ದರ್ಶಿನಿ ಡೆಲ್ಟಾ. ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.

 ಪೂರ್ಣಿಯ ನಿಜವಾದ ಹೆಸರು ಲಾವಣ್ಯ. ಇವರ ರಿಯಲ್‌ ಪತಿಯ ಹೆಸರು ಶಶಿ. ಶಶಿ ಹಾಗೂ ಲಾವಣ್ಯ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಶಶಿ ಅವರು ಅಮೃತಧಾರೆ ಸೀರಿಯಲ್​ನಲ್ಲಿ ಭೂಮಿಕಾ ಸಹೋದರನ ಪಾತ್ರ ಮಾಡುತ್ತಿದ್ದಾರೆ. ರಿಯಾಲಿಟಿ ಷೋ ಒಂದರಲ್ಲಿ ಲಾವಣ್ಯ ಅವರ ಹುಟ್ಟಿನ ಬಗ್ಗೆ ಅಪ್ಪ ಹೇಳಿಕೊಂಡಿದ್ದರು. ಪತ್ನಿ ಗರ್ಭಿಣಿಯಾಗಿದ್ದಾಗ ಅಂದರೆ ಲಾವಣ್ಯ ಹೊಟ್ಟೆಯಲ್ಲಿ ಇದ್ದಾಗ ಆಗಿನ ಸ್ಥಿತಿಯಲ್ಲಿ ಮಗು ಹುಟ್ಟುವುದು ಬೇಡವಾಗಿತ್ತು. ಅದಕ್ಕಾಗಿ ಪರಂಗಿ ಕಾಯಿ ತಿನ್ನಬೇಕೆಂದು ಆರೇಳು ಕಿಲೋಮೀಟರ್‌ ಪರಂಗಿ ಕಾಯಿ ಹುಡುಕಿ ಹೊರಟಿದ್ದು, ಕೊನೆಗೆ ಅದು ಸಿಗದೇ ಇದ್ದುದ ಬಗ್ಗೆ ತಿಳಿಸಿದ್ದರು!

ಪೋಸ್ಟ್​ ಮಾರ್ಟಮ್​ನಲ್ಲಿ ದೇಹ ಇನ್ನೇನು ಕೊಯ್ಯಬೇಕು ಎನ್ನುವಷ್ಟರಲ್ಲಿಯೇ ಎದ್ದು ಕುಳಿತ ಕುಡುಕ!

View post on Instagram