Asianet Suvarna News Asianet Suvarna News

Tunisha Sharma Death Case; ಇದು ಲವ್ ಜಿಹಾದ್ ವಿಷಯ: BJP ನಾಯಕರ ಗಂಭೀರ ಆರೋಪ

ತುನಿಷಾ ಶರ್ಮಾ ಸಾವಿನ ಪ್ರಕರಣ ಈಗ ಲವ್ ಜಿಹಾದ್ ಆಂಗಲ್ ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಬಿಜಿಪಿ ನಾಯಕ ಗಂಭೀರ ಆರೋಪ ಮಾಡಿದ್ದಾರೆ. 

Tunisha Sharma Death Case; Love jihad angle claims BJP leader sgk
Author
First Published Dec 26, 2022, 1:15 PM IST

ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣ ಈಗ ಲವ್ ಜಿಹಾದ್ ಆಂಗಲ್ ಪಡೆದುಕೊಳ್ಳುತ್ತಿದೆ. ಈಗಾಗಲೇ ತುನಿಷಾ ಶರ್ಮಾ ಅವರ ಬಾಯ್‌ಫ್ರೆಂಡ್, ಸಹ ನಟ ಶೀಜಾನ್ ಖಾನ್ ಅವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುನಿಷಾ ಶರ್ಮಾ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಶೀಜಾನ್ ಖಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಪೊಲೀಸರು. ಇದೀಗ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು ಈ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ನಾಯಕ ಗಿರೀಶ್ ಮಹಾಜನ್ ಅವರು ಮಾತನಾಡಿದ್ದಾರೆ. ತುನಿಷಾ ಸಾವು ಲವ್ ಜಿಹಾದ್ ವಿಷಯವಾಗಿದೆ ಎಂದು ಹೇಳಿದ್ದಾರೆ. ಲವ್ ಜಿಹಾದ್ ಆಂಗಲ್‌ನಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗಿರೀಶ್ ಮಹಾಜನ್ ಹೇಳಿದರು.

'ಇದು ಲವ್ ಜಿಹಾದ್ ವಿಷಯವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದರ ವಿರುದ್ಧ ಕಠಿಣ ಕಾನೂನು ತರಲು ನಾವು ಚಿಂಸುತ್ತಿದ್ದೀವಿ' ಎಂದು ಮಹಾಜನ್ ಹೇಳಿದರು.  
 
ತುನಿಷಾ ಸಾವಿನ ಬಗ್ಗೆ ಮಾತನಾಡಿದ ಪೊಲೀಸ್ ಆಯುಕ್ತ ಚಂದ್ರಕಾಂತ್ ಜಾದವ್, ಸದ್ಯಕ್ಕೆ ಯಾವುದೇ ಬೇರೆ ಆಫೇರ್, ಬ್ಲ್ಯಾಕ್‌ಮೇಲ್ ಅಥವಾ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದರು. 'ತನಿಖೆ ನಡೆಯುತ್ತಿದೆ. ಆರೋಪಿ ಶೀಜಾನ್ ಮತ್ತು ತುನಿಷಾ ಅವರ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬೇರೆ ಅಫೇರ್, ಬ್ಲ್ಯಾಕ್ ಮೇಲ್ ಅಥವಾ ಲವ್ ಜಿಹಾದ್ ಸದ್ಯಕ್ಕೆ ನಡೆದಿಲ್ಲ' ಎಂದು ಹೇಳಿದರು. 

Tunisha Sharma 20 ವರ್ಷಕ್ಕೆ ಬದುಕು ಅಂತ್ಯಗೊಳಿಸಿದ ನಟಿ, ಕಾರಣ ನಿಗೂಢ!

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

20 ವರ್ಷ ವಯಸ್ಸಿನ ನಟಿ ತುನಿಷಾ ಶೂಟಿಂಗ್ ನಡುವೆ ಚಹಾ ವಿರಾಮದ ವೇಳೆ ವಾಶ್‌ರೂಮ್‌ಗೆ (wash room) ತೆರಳಿದ್ದು, ಅಲ್ಲೇ ನೇಣು ಹಾಕಿಕೊಂಡಿದ್ದರು. ಶೌಚಾಲಯಕ್ಕೆ ಹೋದ ಆಕೆ ಎಷ್ಟೇ ಹೊತ್ತಾದರೂ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಹೋದಾಗ ಅವರ ದೇಹ ನೇತಾಡುತ್ತಿರುವುದು ಕಾಣಿಸಿದೆ. ಕೂಡಲೇ ಶೂಟಿಂಗ್ ಸಿಬ್ಬಂದಿ ಅವಳನ್ನು ಮಧ್ಯರಾತ್ರಿ 1:30 ರ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು  ವೈದ್ಯರು ಘೋಷಿಸಿದ್ದರು. 

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ: ಸಹನಟ ಶೀಜಾನ್ ಮೊಹಮ್ಮದ್ ಖಾನ್ ಬಂಧನ

ತುನಿಷಾ ಬಗ್ಗೆ 

ತುನಿಷಾ  ಶರ್ಮಾ ಅವರು ಸೋನಿ ಟಿವಿ ಶೋ 'ಭಾರತ್ ಕಾ ವೀರ್ ಪುತ್ರ - ಮಹಾರಾಣಾ ಪ್ರತಾಪ್'  ನಲ್ಲಿ ಬಾಲ ನಟಿಯಾಗಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು, ಅಲ್ಲಿ ಅವರು ಚಂದ್ ಕನ್ವರ್ ಪಾತ್ರವನ್ನು ನಿರ್ವಹಿಸಿದರು. ಇದಾದ ನಂತರ ಅವರು ಹಲವಾರು ಪ್ರದರ್ಶನಗಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ, ಜನಪ್ರಿಯ ನಟಿ ಕತ್ರಿನಾ ಕೈಫ್ ಅವರ ಬಾಲ್ಯದ ಪಾತ್ರಗಳಲ್ಲಿ ಪ್ರಮುಖವಾಗಿ ನಟಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಕ್ ಸುಭಾನ್ ಅಲ್ಲಾ, ಗಬ್ಬರ್ ಪೂಂಚ್‌ವಾಲಾ, 'ಶೇರ್-ಎ-ಪಂಜಾಬ್: ಮಹಾರಾಜ ರಂಜಿತ್ ಸಿಂಗ್' ಮತ್ತು 'ಚಕ್ರವರ್ತಿನ್ ಅಶೋಕ ಸಾಮ್ರಾಟ್' ಮುಂತಾದ ಶೋಗಳಲ್ಲಿ ಕೆಲಸ ಮಾಡಿದ್ದಾರೆ.

Follow Us:
Download App:
  • android
  • ios