ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಯೊಂದೂ ಧಾರಾವಾಹಿಯೂ ವಿಭಿನ್ನವಾಗಿರುತ್ತದೆ. ಅದರಲ್ಲೂ ಅತಿ ಹೆಚ್ಚು ಟಿಆರ್‌ಪಿ ಪಡೆದಿರುವ ಧಾರಾವಾಹಿ 'ಮಹಾನಾಯಕ ಅಂಬೇಡ್ಕರ್'. ಲಾಕ್‌ಡೌನ್‌ ಸಮಯದಲ್ಲಿ ಪ್ರಸಾರವಾದ ಈ ಧಾರಾವಾಹಿ ಜನರ ಮನಸ್ಸಿಗೆ ಹತ್ತಿರವಾಗಿ, ನಮ್ಮಲ್ಲಿದ್ದ ಕೆಲವೊಂದು ತಪ್ಪು ಕಲ್ಪನೆಗಳನ್ನು ದೂರು ಮಾಡಿತ್ತು. ಈಗ ಅದೇ ಹಾದಿಯಲ್ಲಿ 'ನೇತಾಜಿ ಸುಭಾಷ್ ಚಂದ್ರ ಬೋಸ್' ಧಾರಾವಾಹಿ ಆರಂಭವಾಗುತ್ತಿದೆ.

ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆಗೆ ಒಂದು ಗಂಟೆ ಕಾಲ ಪ್ರಸಾರವಾಗಲಿರುವ ಈ ಧಾರಾವಾಹಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ವತಃ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ನಾಯಕನ ಐತಿಹಾಸಿಕ ಕಥೆಯನ್ನು ಬಿಂಬಿಸುತ್ತದೆ. ಸುಭಾಷ್ ಚಂದ್ರ ಬೋಸ್ ಅವರ ಜೀವನಗಾಥೆಯನ್ನು ಮನರಂಜಿಸುವ ರೀತಿಯಲ್ಲಿ ಇತಿಹಾಸವನ್ನು ಮರು ಕಟ್ಟಿಕೊಡಲಿದೆ. 

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸರಿಗಮಪ ಗಾಯಕ ಶ್ರೀ ಹರ್ಷ! ...

ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಹಾದಿ ತುಳಿದ ಅವರು ಜರ್ಮನಿಯ ನೆರವಿನೊಂದಿಗೆ 'ಇಂಡಿಯನ್ ನ್ಯಾಷನಲ್ ಆರ್ಮಿ' ಕಟ್ಟಿದರು. ಒಡಿಶಾದ ಕಟಕ್ ನಲ್ಲಿ ಜನಿಸಿದ ಅವರು ತಮ್ಮ ತಂದೆಯ ಆಸೆಯಂತೆ ಇಂಡಿಯನ್ ಸಿವಿಲ್ ಸರ್ವೀಸ್ ಸೇರಲು ಬ್ರಿಟನ್ನಿಗೆ ಹೋದರೂ, ನಂತರ ಭಾರತಕ್ಕೆ ಹಿಂದಿರುಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಗಾಂಧಿಯವರ ಅಹಿಂಸಾ ಹೋರಾಟ ವಿರೋಧಿಸಿ, ಸ್ವಂತ ಸೇನೆ ಕಟ್ಟಿದರು. ಅವರ ವಿಮಾನ ಅಪಘಾತದಲ್ಲಿ ಮೃತರಾದರು ಎಂದು ನಂಬಲಾಗಿದೆ. ಆದರೆ ಅದನ್ನು ಒಪ್ಪದೇ ಇರುವವರೂ ಬಹಳ ಮಂದಿ ಇದ್ದಾರೆ.  ಅವರ ಜೀವನದ ಬಗ್ಗೆ ಜನರಿಗೆ ತಿಳಿಸಲು ಜೀ ಕನ್ನಡ ವಾಹಿನಿ ಪ್ರಯೋಗಕ್ಕೆ ಕನ್ನಡಿಗರು ಕೃತಜ್ಞತೆ ಹೇಳಿದ್ದಾರೆ.

 

 
 
 
 
 
 
 
 
 
 
 
 
 
 
 

A post shared by Zee Kannada (@zeekannada)