ದುರಸ್ತಿ ಕಾಮಗಾರಿಯಿಂದಾಗಿ ಬಂದ್ ಆಗಿದ್ದ ಆಗುಂಬೆ ಘಾಟಿಯನ್ನು ಇದೀಗ ಲಘು ಮತ್ತು ಭಾರಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಪ್ರಸ್ತುತ ಈ ರಸ್ತೆಯಲ್ಲಿ ಯಾವುದೇ ಗುಡ್ಡ ಕುಸಿತವಾಗಲಿ, ಮರಗಳು ಉರುಳಿ ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಇರುವುದಿಲ್ಲವಾದ್ದರಿಂದ ಈಗ ಭಾರಿ ವಾಹನಗಳ ಸಂಚಾರಕ್ಕೂ ಮುಕ್ತಗೊಳಿಸಲಾಗಿದೆ.
ಉಡುಪಿ(ಅ.20): ಕಳೆದ ಕೆಲವು ದಿನಗಳಿಂದ ದುರಸ್ತಿ ಕಾಮಗಾರಿಯಿಂದಾಗಿ ಬಂದ್ ಆಗಿದ್ದ ಆಗುಂಬೆ ಘಾಟಿಯನ್ನು ಇದೀಗ ಲಘು ಮತ್ತು ಭಾರಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಭಾರೀ ಮಳೆಯಿಂದಾಗಿ ಘಾಟಿಯ ಕೆಲವು ತಿರುವಿನಲ್ಲಿ ಗುಡ್ಡ ಕುಸಿದಿದ್ದು, ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಈ ರಸ್ತೆಯಲ್ಲಿ ನಿಷೇಧಿಸಲಾಗಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದುರಸ್ತಿ ನಂತರ ಮತ್ತೆ ಮಳೆಯಾದ ಹಿನ್ನೆಲೆಯಲ್ಲಿ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನ್, ಕಾರ್‌ಗಳು ಮತ್ತು ದ್ವಿಚಕ್ರ ವಾಹನಗಳೊಂದಿಗೆ ವಾಹನಗಳ ಸಂಚಾರಕ್ಕೆ ಮಾತ್ರ ಮುಕ್ತಗೊಳಿಸಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶಿಸಲಾಗಿತ್ತು.
ಉಡುಪಿ ಜಿಲ್ಲೆಗೆ ಮತ್ತೊಂದು ತಾಲೂಕು : ಸ್ಥಳ ಪರಿಶೀಲನೆ...
ಪ್ರಸ್ತುತ ಈ ರಸ್ತೆಯಲ್ಲಿ ಯಾವುದೇ ಗುಡ್ಡ ಕುಸಿತವಾಗಲಿ, ಮರಗಳು ಉರುಳಿ ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಇರುವುದಿಲ್ಲವಾದ್ದರಿಂದ ಈಗ ಭಾರಿ ವಾಹನಗಳ ಸಂಚಾರಕ್ಕೂ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
