Udupi fishermen community ಮೀನುಗಾರ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬೊಮ್ಮಾಯಿ

ಮೊಗವೀರರಿಗಾಗಿ ಈ ವರ್ಷ 5000 ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಬಂದರುಗಳಲ್ಲಿ ಹೂಳೆತ್ತುವುದು ಹಾಗೂ ಸುಮಾರು1000 ವಿದ್ಯಾರ್ಥಿಗಳಿಗೆ  ಸಾಕಾಗುವ ಹಾಸ್ಟೆಲ್ ಸಮುಚ್ಚಯ ನಿರ್ಮಾಣ ಮುಂತಾದ ಕ್ರಮಗಳನ್ನು ಮೊಗವೀರರ ಏಳಿಗೆಗಾಗಿ ಕೈಗೊಳ್ಳಲಾಗುವುದು ಎಂದು ಸಿಎಂ ಉಡುಪಿಯಲ್ಲಿ ಹೇಳಿದ್ದಾರೆ.

CM basavaraj bommai announces vidyanidhi scheme and various scheme to fishermen community in udupi

ವರದಿ: ಶಶಿಧರ ಮಾಸ್ತಿಬೈಲು, ಏಷಿಯಾನೆಟ್ ಸುವರ್ಣ ನ್ಯೂಸ್

ಉಡುಪಿ (ಏ.11): ಕರಾವಳಿ ಜಿಲ್ಲೆ ಉಡುಪಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮೀನುಗಾರ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ನೇಕಾರ ಮತ್ತು ಮೀನುಗಾರ ಸಮುದಾಯದ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸುವುದಾಗಿ ಉಡುಪಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

 

ಉಡುಪಿ ಜಿಲ್ಲೆ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾದರು ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಾರ್ವಜನಿಕ ಸಭೆಯಲ್ಲಿ ಸಿಎಂ ಭಾಗಿಯಾದರು. 

ಮಹಾಲಕ್ಷ್ಮಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ಐದು ಕೋಟಿ ಅನುದಾನ ನೀಡುತ್ತೇನೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಮೊಗವೀರ ಮಕ್ಕಳಿಗೆ ಹಿಂದುಳಿದ ವರ್ಗಗಳ ಹಾಸ್ಟೆಲ್,   ಹತ್ತು ತಿಂಗಳಿಗೆ ಎರಡು ಲಕ್ಷ ಲೀಟರ್ ಸಬ್ಸಿಡಿ ಡೀಸೆಲ್ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಬ್ಯಾಂಕ್ ಗಳ ಜೊತೆ ಮಾತುಕತೆ ಮಾಡಿ ಯೋಜನೆ ರೂಪಿಸುತ್ತೇನೆ ಎಂದು ಭರವಸೆ ನೀಡಿದರು.

 

ನಮಗೆ ವಿಪಕ್ಷಗಳಿಂದ ಕಲಿಯಬೇಕಾದ್ದು ಏನು ಇಲ್ಲ CM Basavaraj Bommai

ದುಡ್ಡೇ ದೊಡ್ಡಪ್ಪ ಅಲ್ಲ ದುಡಿಮೆಯೇ ದೊಡ್ಡಪ್ಪ  ಎಂಬ ಬಗ್ಗೆ ನಾನು ನಂಬಿಕೆ ಇಟ್ಟುಕೊಂಡಿದ್ದೇನೆ. ಮೊಗವೀರ ಸಮುದಾಯ ಇದೇ ನಂಬಿಕೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ನನ್ನ ಮನೆ ಮನಸ್ಸಿನ ಬಾಗಿಲು ಸದಾ ತರೆದಿರುತ್ತದೆ. ನಾನು ಮೊಗವೀರ ಸಮುದಾಯದ ಜೊತೆ ಇದ್ದೇನೆ. ಸಮಸ್ಯೆಗಳು ಬೇಡಿಕೆಗಳಿದ್ದಲ್ಲಿ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದರು. 

 

ಸಾರಿಗೆ ಸಚಿವ ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಮೀನುಗಾರಿಕಾ ಸಚಿವ  ಎಸ್. ಅಂಗಾರ ಶಾಸಕ, ಲಾಲಾಜಿ ಮೆಂಡನ್ ರಘುಪತಿ ಭಟ್, ವೇದವ್ಯಾಸ ಕಾಮತ್ , ಭರತ್ ಶೆಟ್ಟಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದೇಗುಲದ ಗೌರವಾಧ್ಯಕ್ಷ ಜಿ. ಶಂಕರ್ ಉಪಸ್ಥಿತರಿದ್ದರು.

Kalaburagi Central University ರಾಮನವಮಿ ಆಚರಣೆ ಮಾಡಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ 

Latest Videos
Follow Us:
Download App:
  • android
  • ios