ಉಡುಪಿ(ಅ.30): ಅಧಿಕಾರ ಕಳೆದುಕೊಂಡ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಎಂದು ಸಿದ್ದರಾಮಯ್ಯ ನಿಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೇಸ್ ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್ ನಲ್ಲಿ ಅನೇಕ ಬಣಗಳಾಗಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್ ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ದ್ದು ಬೇರೆಯೇ ಬಣ. ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಯಾಕೆ ಸತ್ತೋಯ್ತು..? ರೀಸನ್ ಹೇಳಿದ್ರು ಈಶ್ವರಪ್ಪ

ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತದೆ. ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡಲಿದೆ. ಜೆಡಿಎಸ್ ನವರು ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ. ಯಾವುದೇ ಶಾಸಕರು ಬಿಜೆಪಿಗೆ ಬರ್ಬೇಕಾದ್ರೆ ಶಾಸಕಗಿರಿ ಬಿಡ್ಬೇಕು. ಮೊದಲಿನಿಂದಲೂ ನಮ್ಮದು ಇದೇ ನಿಲುವು ಎಂದು ಶೋಭಾ ಸ್ಪಷ್ಟಪಡಿಸಿದ್ದಾರೆ.

ಜಾತಿ, ಧರ್ಮ ಒಡೆದ ಸಿದ್ದರಾಮಯ್ಯ

ಸಿದ್ದರಾಮಯ್ಯ ಐದು ವರ್ಷ ಹೇಗೆ ನಡ್ಕೊಂಡಿದಾರೆ ಅನ್ನೋದನ್ನು ಜನತೆ ನೋಡಿದ್ದಾರೆ. ಜಾತಿ, ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಜಾತಿಗಳನ್ನು ಒಡೆದು ಅದರ ಲಾಭ ಪಡೆಯವ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ. ಈ ಬಾರಿ ಯಾರೂ ಸಿದ್ದರಾಮಯ್ಯ ಕುತಂತ್ರಕ್ಕೆ ಬಲಿಯಾಗಲ್ಲ. ಸಿದ್ದರಾಮಯ್ಯ ನವರ ಕುರ್ಚಿ ಕುತಂತ್ರ ಕ್ಕೆ ಬಲಿಯಾಗಲ್ಲ ಎಂದಿದ್ದಾರೆ.

ಕನಕಪುರ ಗೆಲ್ಲೋದು ಕಷ್ಟ, ಆದ್ರೆ ರಾಜ್ಯದಲ್ಲಿ ಡಿಕೆಶಿ ಪ್ರಭಾವ ಇಲ್ಲ

ಡಿ ಕೆ ಶಿವಕುಮಾರ್ ಬಿಡುಗಡೆಯಿಂದ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಇಲ್ಲ. ಡಿಕೆ ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ. ಡಿಕೆಶಿ ಮಂತ್ರಿಯಾಗಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಡಿಕೆಶಿ ಪ್ರಭಾವ ಇದ್ರೂ 104 ಸ್ಥಾನ ಗೆದ್ದಿದ್ದೆವು. ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು. ಕನಕಪುರ ಗೆಲ್ಲೋದು ನಮಗೆ ಇವತ್ತಿಗೂ ಕಷ್ಟ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ. ಆದರೆ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ. ರಾಜ್ಯದ ಜನಕ್ಕೆ ಡಿಕೆಶಿ ಏನು ಅನ್ನೋದು ಅರ್ಥವಾಗಿದೆ ಎಂದಿದ್ದಾರೆ.

ಹುಬ್ಬಳ್ಳಿ ಸ್ಫೋಟ: ಎರಡು ವಾರದಲ್ಲಿ ಎಫ್‌ಎಸ್‌ಎಲ್ ವರದಿ ನಿರೀಕ್ಷೆ