ಕಾರವಾರ [ಅ.26] : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಸಂಪೂರ್ಣ ತತ್ತರಿಸಿದೆ. ಹಲವೆಡೆ ಸಂಚಾರ ಅಸ್ತವ್ಯಸ್ತವಾದರೆ ಇನ್ನೂ ಹಲವೆಡೆ ನೆಲೆ ಕಳೆದುಕೊಂಡಿದ್ದಾರೆ. 

ಸಮುದ್ರದ ಅಬ್ಬರ ಜೋರಾಗಿದ್ದು, ಭಾರೀ ಬಿರುಗಾಳಿ ಸಹಿತ ಮಳೆಯು ಸುರಿಯುತ್ತಿದೆ. ಕೃಷಿ ಭೂಮಿಯು ಮಳೆಯಿಂದ ಸಂಪೂರ್ಣ ಹಾನಿಯಾಗಿದೆ. 

 ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿರುವುದರಿಂದ ಅಧಿಕಾರಿಗಳು, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಆದೇಶಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸತತ ಭಾರಿಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಸಂದರ್ಭ ಇರುವುದರಿಂದ ಅನುಮತಿ ಪಡೆಯದೆ ಅಧಿಕಾರಿಗಳು, ಸಿಬ್ಬಂದಿ ಕೇಂದ್ರಸ್ಥಾನ ಬಿಡಬಾರದು. ದೀಪಾವಳಿ ಹಬ್ಬದ ರಜೆ ವೇಳೆ ಕೂಡಾ ಕೇಂದ್ರಸ್ಥಾನದಲ್ಲಿ ಇರಬೇಕು. ಪೂರ್ವಾನುಮತಿ ಪಡೆಯದೇ ಕೇಂದ್ರಸ್ಥಾನ ಬಿಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.