ಯಲ್ಲಾಪುರ [ನ.15]: ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಈಗಾಗಲೇ ಬಿಜೆಪಿ ಸೇರ್ಪಡೆಯಾಗಿದ್ದು, ಇದರ ಬೆನ್ನಲ್ಲೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡುತ್ತಿದ್ದಾರೆ. 

ಕೈ ಗೆ ಕೈ ಕೊಟ್ಟು ರಾಜೀನಾಮೆ ನೀಡಿದ್ದ ಬಳಿಕ ಅನರ್ಹರಾಗಿ ಇದೀಗ ಬಿಜೆಪಿ ಕೈ ಹಿಡಿದಿರುವ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿಯಿಂದ ಯಲ್ಲಾಪುರ ಉಪ ಚುನಾವಣೆಗೆ ಟಿಕೆಟ್ ಸಹ ಸಿಕ್ಕಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. 

ಬಿಜೆಪಿ ಸೇರ್ಪಡೆ ಬಳಿಕ ಸ್ವ ಕ್ಷೇತ್ರಕ್ಕೆ ತೆರಳಿದ ಹೆಬ್ಬಾರ್ ಯಲ್ಲಾಪುರ, ಕಾರವಾರದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ಯಲ್ಲಾಪುರದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. 

ಈ ಸಭೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು. 

ಬೈ ಎಲೆಕ್ಷನ್: 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ...

ಈ ಎಲ್ಲಾ ಮುಖಂಡರೂ ಬಿಜೆಪಿ ಸೇರ್ಪಡೆ ಮಾಡುವ ವಿಚಾರದ ಸಂಬಂಧ ಹೆಬ್ಬಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  ಹೆಬ್ಬಾರ್ ಸಭೆ  ನಡೆಸುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಭರ್ಜರಿ ಏಟು ನೀಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. 

ಇದೇ ಡಿಸೆಂಬರ್ 5 ರಂದು ರಾಜ್ಯದ 15 ಕ್ಷೆತ್ರಗಳಿಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 18ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿಸೆಂಬರ್ 9ಕ್ಕೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.