Asianet Suvarna News Asianet Suvarna News

ಪ್ರತಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಪೊಲೀಸ್, ಬೆಂಗಳೂರಿಗರೇ ಎಚ್ಚರ!

ಟ್ರಾಫಿಕ್ ಉಲ್ಲಂಘನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದ ಕೆಲವು ಪ್ರಮುಖ ಜಂಕ್ಷನ್‌ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಮನುಷ್ಯಾಕೃತಿಗಳಿಗೆ ಪೊಲೀಸ್ ಸಮವಸ್ತ್ರ ತೊಡಿಸಿ ನಿಲ್ಲಿಸಿದ್ದಾರೆ.

First Published Dec 13, 2019, 11:27 AM IST | Last Updated Dec 13, 2019, 11:27 AM IST

ಬೆಂಗಳೂರು(ಡಿ.13): ಟ್ರಾಫಿಕ್ ಉಲ್ಲಂಘನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದ ಕೆಲವು ಪ್ರಮುಖ ಜಂಕ್ಷನ್‌ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಮನುಷ್ಯಾಕೃತಿಗಳಿಗೆ ಪೊಲೀಸ್ ಸಮವಸ್ತ್ರ ತೊಡಿಸಿ ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಬೇಕಂತಲೇ ರೂಲ್ಸ್ ಬ್ರೇಕ್ ಮಾಡೋರಿಗೆ ಬೆಂಗ್ಳೂರು ಟ್ರಾಫಿಕ್ ಪೊಲೀಸ್‌ ಹೊಸ ತಂತ್ರ

ಈ ಮನುಷ್ಯಾಕೃತಿಗಳು, ರಿಫ್ಲೆಕ್ಟರ್ ಜಾಕೆಟ್‌, ಬಿಳಿ ಶರ್ಟ್‌, ಖಾಕಿ ಪ್ಯಾಂಟ್‌, ಬಿಳಿ ಟೋಪಿ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದು, ಇದರಿಂದ ಸಂಚಾರ ಉಲ್ಲಂಘನೆ ಕಡಿಮೆಯಾಗುತ್ತದೆ ಎಂಬುದು ಪೊಲೀಸ್ ಇಲಾಖೆಯ ಭರವಸೆ.

ಇದನ್ನೂ ಓದಿ: ದ್ವಿಚಕ್ರ ಸವಾರರಿಗೆ ಶಾಕ್; ಪೊಲೀಸರಿಂದ ಹಾಫ್ ಹೆಲ್ಮೆಟ್ ಆಪರೇಷನ್!

ಅದರಂತೆ ಟ್ರಾಫಿಕ್ ಉಲ್ಲಂಘನೆಗಳನ್ನು ದಾಖಲಿಸಲು ಈ ಮನುಷ್ಯಾಕೃತಿಗಳಲ್ಲಿ ಕ್ಯಾಮೆರಾ ಅಳವಡಿಸಲು ಪೊಲೀಸ್ ಇಲಾಖೆ ಯೋಚಿಸುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಡಾ.ಬಿ.ಆರ್. ರವಿಕಾಂತ ಗೌಡ, ಈ ಮನುಷ್ಯಾಕೃತಿಗಳಲ್ಲಿ ಕ್ಯಾಮರಾ ಅಳವಡಿಕೆ ಟ್ರಾಫಿಕ್ ನಿಯಮ ಉಲ್ಲಂಘನೆಯನ್ನು ಮತ್ತಷ್ಟು ತಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Video Top Stories