ಬೆಳಗಾವಿಯ ಸುತಗಟ್ಟೆ ಬಳಿ ಭೀಕರ ಅಪಘಾತ: ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

  • ಬಸ್‌ಗೆ ಅಡ್ಡ ಬಂದ ಬೈಕ್ ಸವಾರ
  • ಬೈಕ್‌ಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಮತ್ತೊಂದು ಬೈಕ್‌ಗೆ ಡಿಕ್ಕಿ
  • ಮೂವರ ಸ್ಥಿತಿ ಗಂಭೀರ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
First Published May 8, 2022, 5:38 PM IST | Last Updated May 8, 2022, 5:38 PM IST

  • ಬೆಳಗಾವಿ: ಬೆಳಗಾವಿಯ ಸುತಗಟ್ಟೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ಸೊಂದಕ್ಕೆ ಅಡ್ಡಲಾಗಿ ಬೈಕೊಂಡು ಬಂದಿದ್ದು ಆತನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮತ್ತೊಂದು ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯಿಂದ ಈ ಬಸ್‌ ಸಂಕೇಶ್ವರದತ್ತ ತೆರಳುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Video Top Stories