ಬೆಂಗಳೂರು: 12 ಗಂಟೆಯಲ್ಲಿ 52MM ಮಳೆ : ಇನ್ನು 5 ದಿನ ಮುಂದುವರಿಯಲಿದೆ ವರ್ಷಧಾರೆ : ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಕೇವಲ 12 ಗಂಟೆಯಲ್ಲಿ 52 ಮಿಲಿ ಮೀಟರ್ ಮಳೆಯಾಗಿದ್ದು, ಧಾರಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರಿನಲ್ಲಿ ಕೇವಲ 12 ಗಂಟೆಯಲ್ಲಿ 52 ಮಿಲಿ ಮೀಟರ್ ಮಳೆಯಾಗಿದ್ದು, ಧಾರಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗಿನ ಜಾವ ಸುರಿದ ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದಿದ್ದಲ್ಲದೇ ರಸ್ತೆಗಳು ನೀರು ತುಂಬಿ ನದಿಯಂತಾಗಿದ್ದವು, ಇದರಿಂದ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು, ಹೀಗಾಗಿ ಸದಾ ಟ್ರಾಫಿಕ್‌ನಿಂದ ಗಿಜಿಗುಡುವ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ಮತ್ತಷ್ಟು ದುಸ್ತರವಾಗಿತ್ತು. ಇದೇ ರೀತಿ ಇನ್ನು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. 

Related Video