ಕತ್ರಿಗುಪ್ಪೆಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

  • ಕತ್ರಿಗುಪ್ಪೆ ಬಳಿ ಭೀಕರ ಅಪಘಾತ
  • ಓರ್ವ ಸಾವು ಮೂವರಿಗೆ ಗಾಯ
  • ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Share this Video
  • FB
  • Linkdin
  • Whatsapp

ಬೆಂಗಳೂರು: ಕತ್ರಿಗುಪ್ಪೆ ಬಳಿ ಕಾಫಿ ಕುಡಿಯಲು ಬಂದಿದ್ದ ನಾಲ್ವರು ಯುವಕರು ರಸ್ತೆ ಬದಿ ನಡ್ಕೊಂಡು ಬರ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬಾತ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ದುರಂತ ಸಂಭವಿಸಿದೆ. ಪಾದಚಾರಿಗಳಿಗೆ ಗುದ್ದಿದ್ದ ಕಾರು ನಂತರ 1 ಬೈಕ್, 1 ಕಾರಿಗೂ ಡಿಕ್ಕಿ ಹೊಡೆದಿದೆ. ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಾಲಕ ಮುಕೇಶ್ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Video