Asianet Suvarna News Asianet Suvarna News

ಬೀದಿ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ: ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ

  • ಬೀದಿ ನಾಯಿ ಮೇಲೆ ಕಾರು ಚಾಲನೆ
  • ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಘಟನೆ
  • ಚಾಲಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಬೀದಿ ನಾಯಿಯೊಂದರ ಮೇಲೆ ಚಾಲಕ ಕಾರು ಹತ್ತಿಸಿದ್ದು, ಘಟನೆಯ ಬಳಿಕ ನಾಯಿ ಮೃತಪಟ್ಟಿದೆ. ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಬೀದಿಯಲ್ಲಿದ್ದ ನಾಯಿಯ ಮೇಲೆ ಚಾಲಕ ಕಾರು ಹತ್ತಿಸಿದ್ದು ಕಾರಿನ ಎರಡು ಟೈರ್‌ಗಳು ನಾಯಿಯ ದೇಹದ ಮೇಲೆ ಹರಿದು ಹೋಗಿದೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.