Asianet Suvarna News Asianet Suvarna News

ಚಾಮರಾಜಪೇಟೆ ಈದ್ಗಾ ಮೈದಾನದ ಬಳಿ ನಾಗರೀಕ ಒಕ್ಕೂಟದಿಂದ ಫ್ಲೆಕ್ಸ್: ವಾಗ್ವಾದ

ಚಾಮರಾಜಪೇಟೆಯ ಈದ್ಗಾ ಮೈದಾನದ ಸುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ.

Aug 14, 2022, 3:54 PM IST

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದ್ದು, ಮೈದಾನದ ಸುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಸಂಘಟನೆಗಳಿಗೂ ಭಾಗವಹಿಸಲು ಅವಕಾಶವಿಲ್ಲ. ಆದರೆ ಮೈದಾನದ ಬಳಿ ನಾಗರೀಕರ ಒಕ್ಕೂಟದಿಂದ ಫ್ಲೆಕ್ಸ್ ಅಳವಡಿಸಲು ಮುಂದಾಗಿದ್ದು, ಇದನ್ನು ತೆರವುಗಳಿಸಲು ಸೂಚಿಸಿದ ಬೆಂಗಳೂರು ನಗರ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ.