BMTC Bus Fire ಪ್ರಯಾಣಿಸತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಪಾರು!

ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕನಕಪುರ ರಸ್ತೆ ಸೌತೇಂಡ್ ಸರ್ಕಲ್ ನಲ್ಲಿ ನಡೆದಿದೆ. ಬಸ್ ಪ್ರಯಾಣಿಸುತ್ತಿದ್ದ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ತಕ್ಷಣ ಬಸ್ ನಿಲ್ಲಿಸಿದ್ದಾರೆ. ಬಸ್‌ನಲ್ಲಿದ್ದ 20 ಪ್ರಯಾಣಿಕರು  ಡ್ರೈವರ್ ಹಾಗೂ ಕಂಡಕ್ಟರ್ ನೆರವಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.01): ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕನಕಪುರ ರಸ್ತೆ ಸೌತೇಂಡ್ ಸರ್ಕಲ್ ನಲ್ಲಿ ನಡೆದಿದೆ. ಬಸ್ ಪ್ರಯಾಣಿಸುತ್ತಿದ್ದ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ತಕ್ಷಣ ಬಸ್ ನಿಲ್ಲಿಸಿದ್ದಾರೆ. ಬಸ್‌ನಲ್ಲಿದ್ದ 20 ಪ್ರಯಾಣಿಕರು ಡ್ರೈವರ್ ಹಾಗೂ ಕಂಡಕ್ಟರ್ ನೆರವಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹೊತ್ತಿ ಉರಿದಿತ್ತು. ಇದೀಗ ಎರಡನೆ ಪ್ರಕರಣವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video