ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಉತ್ಸವದಲ್ಲಿ ದಕ್ಷಿಣ ಭಾರತದ ಪ್ರವಾಸಿ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.  
 

Share this Video
  • FB
  • Linkdin
  • Whatsapp

ಎಫ್ ಕೆ ಸಿ ಸಿ ಐ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ ಆಯೋಜಿಸಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಉತ್ಸವದಲ್ಲಿ ದಕ್ಷಿಣ ಭಾರತದ ಪ್ರವಾಸಿ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಈ ಉತ್ಸವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಡಂಬಡಿಕೆಗೂ ಸಹಿ ಬೀಳುವುದು ನಿಶ್ಚಿತವಾಗಿದೆ. ಇದೇ ವೇಳೆ ಕರ್ನಾಟಕದ ಪ್ರವಾಸಿ ತಾಣಗಳ ಕುರಿತ ಪ್ರಚಾರವೂ ನಡೆಯಲಿದೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮತ್ತು ಉತ್ಸವದ ಅಧ್ಯಕ್ಷ ಕೆ. ಶಿವಷಣ್ಮುಗಂ ತಿಳಿಸಿದ್ದಾರೆ.

Related Video