
'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು. ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.
ಬೆಂಗಳೂರು(ಅ. 17) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ.
ಕಳಸಾ-ಬಂಡೂರಿ ನೀರು ಹೋರಾಟದ ಪೂರ್ಣ ಕತೆ
ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು. ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.