ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಎಂದ ಕಟೀಲ್!

ಶಾಸಕ ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ಇದರ ನಡುವೆ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿದ್ದಾರೆ. ಈ ಘಟನೆ ಹಿಂದೆ ಯಾರಿದ್ದರೂ ಕಠಿಣ ಕ್ರಮ ಜರುಗಿಸುವುದಾಗಿ ಕಟೀಲ್ ಹೇಳಿದ್ದಾರೆ.

First Published Aug 15, 2021, 7:32 PM IST | Last Updated Aug 15, 2021, 7:32 PM IST

ಬೆಂಗಳೂರು(ಆ.15):  ಶಾಸಕ ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ಇದರ ನಡುವೆ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿದ್ದಾರೆ. ಈ ಘಟನೆ ಹಿಂದೆ ಯಾರಿದ್ದರೂ ಕಠಿಣ ಕ್ರಮ ಜರುಗಿಸುವುದಾಗಿ ಕಟೀಲ್ ಹೇಳಿದ್ದಾರೆ.

ಬೆಜೆಪಿ ಶಾಸಕನ ಮನೆ ಮುಂದೆ ನಿಲ್ಲಿಸಿದ್ದ ಟೋಯೋಟಾ ಫಾರ್ಚುನರ್ ಹಾಗೂ ಮಹೀಂದ್ರ ಥಾರ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಪ್ರಕರಣ ಭಾರಿ ಸದ್ದು ಮಾಡಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಸಚಿವರು, ಬಿಜೆಪಿ ನಾಯಕರು ಸತೀಶ್ ರೆಡ್ಡಿ ಮನಗೆ ಭೇಟಿ ನೀಡಿದ್ದಾರೆ.