ಉಂಡ ಮನೆಗೆ ಕನ್ನ: ಅಮೇಜಾನ್ ಸೆಲ್ಲರ್ ಸರ್ವೀಸ್‌ನಲ್ಲಿ ಕಳ್ಳತನ

ನಗರದ ಅಮೇಜಾನ್ ಸೆಲ್ಲರ್ ಸರ್ವೀಸ್‌ನಲ್ಲಿ ಕಳ್ಳತನ ನಡೆದಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವನೇ ಈ ಕೃತ್ಯದಲ್ಲಿ ಭಾಗಿಯಾಗುವ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದಾನೆ.

First Published Oct 10, 2022, 9:26 PM IST | Last Updated Oct 10, 2022, 9:26 PM IST

ಬೆಂಗಳೂರು: ನಗರದ ಅಮೇಜಾನ್ ಸೆಲ್ಲರ್ ಸರ್ವೀಸ್‌ನಲ್ಲಿ ಕಳ್ಳತನ ನಡೆದಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವನೇ ಈ ಕೃತ್ಯದಲ್ಲಿ ಭಾಗಿಯಾಗುವ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದಾನೆ. ಮಹಮ್ಮದ್ ಅಸೀಂ ಎಂಬಾತ ಕಳ್ಳತನವೆಸಗಿದ್ದು, ಆತನ ಕೃತ್ಯ ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆತನನ್ನು ಬಂಧಿಸಲಾಗಿದ್ದು, ಆತನಿಂದ ಒಂದು ಲಕ್ಷದ ಮೂವತ್ತು ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ. ಬೆಳಗ್ಗಿನ ಜಾವ 3.30ರ ಸುಮಾರಿಗೆ ಈ ಕೃತ್ಯವೆಸಗಿದ್ದಾನೆ.