LPG ಗ್ಯಾಸ್‌ ಸಿಲಿಂಡರ್‌ ಮತ್ತಷ್ಟು 'ಭಾರ': 15 ದಿನದಲ್ಲಿ 2ನೇ ಬಾರಿ ಬೆಲೆ ಏರಿಕೆ!

ಬೆಲೆ ಏರಿಕೆಯಿಂದ ಸಂಕಷ್ಟಕ್ಕೊಳಗಾಗಿರುವ ಜನಸಾಮಾನ್ಯರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ಕೊಟ್ಟಿದೆ. ಹೌದು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಧ್ಯೆ, ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಇಂದು, ಬುಧವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಕಳೆದ ಹದಿನೈದು ದಿನಗಳಲ್ಲಿ ಎರಡನೇ ಬಾರಿ ಗ್ಯಾಸ್ ಸಿಲಿಂಡರ್ ದರ ಹೆಚ್ಚಳವಾದಂತಾಗಿದೆ.

 

First Published Sep 1, 2021, 1:31 PM IST | Last Updated Sep 1, 2021, 2:03 PM IST

ಬೆಂಗಳೂರು(ಸೆ.01) ಬೆಲೆ ಏರಿಕೆಯಿಂದ ಸಂಕಷ್ಟಕ್ಕೊಳಗಾಗಿರುವ ಜನಸಾಮಾನ್ಯರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ಕೊಟ್ಟಿದೆ. ಹೌದು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಧ್ಯೆ, ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಇಂದು, ಬುಧವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಕಳೆದ ಹದಿನೈದು ದಿನಗಳಲ್ಲಿ ಎರಡನೇ ಬಾರಿ ಗ್ಯಾಸ್ ಸಿಲಿಂಡರ್ ದರ ಹೆಚ್ಚಳವಾದಂತಾಗಿದೆ.

ಕಳೆದ ತಿಂಗಳು ಆಗಸ್ಟ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆ ಆಗಸ್ಟ್‌ 17ರಿಂದ ಜಾರಿಗೆ ಬರುವಂತೆ 25ರೂ ಏರಿಸಲಾಗಿತ್ತು. ಆದರೀಗ ಮತ್ತೆ  ಸೆಪ್ಟೆಂಬರ್‌ 1ರಿಂದ ಜಾರಿಗೆ ಪ್ರತಿ ಸಿಲಿಂಡರ್ ಬೆಲೆ 25 ರೂ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ಸಿಲಿಂಡರ್‌ ಬೆಲೆ 887ರೂ ಆಗಲಿದೆ.