Karnataka Budget : ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ

ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಸಾಲ ಮಾಡಿ ಅದರಲ್ಲಿ ಅಭಿವೃದ್ಧಿ ಗೆ ಕೇವಲ ಒಂದು ಸಾವಿರ‌ ಕೋಟಿ ಮಾತ್ರ ಬಳಕೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Share this Video
  • FB
  • Linkdin
  • Whatsapp

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ(Siddaramaiah) ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraja Bommai) ಆರೋಪಿಸಿದ್ದಾರೆ. ಬಜೆಟ್(Budget) ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ: DK Shivakumar: ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ

Related Video