ಸಮತೋಲನದ ಬಜೆಟ್: ಆಯವ್ಯಯ ಪರ ನಿರ್ಮಲಾ ಬ್ಯಾಟ್!

ಲೋಕಸಭೆಯಲ್ಲಿ ತಾವು ಇಂದು ಮಂಡಿಸಿದ ಕೇಂದ್ರ ಬಜೆಟ್ 2020ನ್ನು ಸಮರ್ಥಿಸಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದೊಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ(ಫೆ.01): ಲೋಕಸಭೆಯಲ್ಲಿ ತಾವು ಇಂದು ಮಂಡಿಸಿದ ಕೇಂದ್ರ ಬಜೆಟ್ 2020ನ್ನು ಸಮರ್ಥಿಸಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದೊಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ. ಬಜೆಟ್ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದ್ದು. ಎಲ್ಲ ವರ್ಗದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ ಎಂದು ಹೇಳಿದರು. ಪ್ರಮುಖವಾಗಿ ತೆರಿಗೆ ವಿನಾಯ್ತಿ ಈ ಬಾರಿಯ ಬಜೆಟ್‌ನ ಆಕರ್ಷಣೆಯಾಗಿದ್ದು, ಹೊಸ ಸ್ಲ್ಯಾಬ್ ತೆರಿಗೆದಾರರಿಗೆ ಅನುಕೂಲ ಕಲ್ಪಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ: ಬಜೆಟ್ ಹೊಗಳಿದ ಪ್ರಧಾನಿ!

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video