Education Sector: ಈ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: 500 ಹಿಂದುಳಿದ ವಿದ್ಯಾರ್ಥಿಗಳಿಗೆ JEE/NEET ಉಚಿತ ತರಬೇತಿ
ಸಿಎಂ ಸಿದ್ದರಾಮಯ್ಯ ಇಂದು 15ನೇ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೊದಲ ಪೂರ್ಣಕಾಲಿಕ ಬಜೆಟ್‌ನನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ.
ಬೆಂಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ಅನುದಾನ ಬಜೆಟ್‌ನಲ್ಲಿ(Budget) ನೀಡಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ( Morarji Desai Residential School) ಪ್ರಾರಂಭಕ್ಕೆ ನಿರ್ಧರಿಸಲಾಗಿದೆ. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ಕೊಡಲಾಗಿದೆ. ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ. 25 ಹೊಸ ಪದವಿ ಕಾಲೇಜು ಸ್ಥಾಪನೆ. ಈ ವರ್ಷದಿಂದ ಎಸ್‌ಇಪಿ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್ ಓದುವಾಗ ಜೋರು ಗದ್ದಲ