
Invest Karnataka Summit 2022: ಬೆಂಗಳೂರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ
ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು. ಈ ವೇಳೆ, ಕರ್ನಾಟಕ ಹಾಗೂ ದೇಶದಲ್ಲಿನ ವಿಫುಲ ಹೂಡಿಕೆ ಅವಕಾಶಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಬೆಂಗಳೂರು (ನ. 2): ಮೂರು ದಿನಗಳ ಕಾಲ ಅರಮನೆ ಆವರಣ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ಹಾಗೂ ಬೆಂಗಳೂರಿನ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಅವರು ಮಾತನಾಡಿದರು.
ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ನಿರೀಕ್ಷೆಯೊಂದಿಗೆ ಸಮಾವೇಶ ನಡೆಸಲಾಗುತ್ತಿದೆ. 5 ಲಕ್ಷ ಕೋಟಿ ರೂ ಬಂಡವಾಳ ಹೂಡಕೆಯಾಗುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾವಿದೆ. ರಾಜ್ಯದಲ್ಲಿ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
Global Investors Meet: ಕರ್ನಾಟಕದ ನೆಲ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತಮ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನರೆನ್ಸ್ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಸಮಾವೇಶದಲ್ಲಿ ಭಾಗಿಯಾಗಿದ್ದರು.