ಲೀಟರ್ ಹಾಲಿನ ದರ 4 ರೂಪಾಯಿಗೆ ಏರಿಕೆ
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹4 ಹೆಚ್ಚಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.ಈ ನಿರ್ಧಾರದೊಂದಿಗೆ, ಹೋಮೋಜಿನೈಸ್ ಟೋನ್ಡ್ ಹಾಲಿನ ದರ ಅರ್ಧ ಲೀಟರ್‌ಗೆ ₹24 ರಿಂದ ₹26 ಗೆ ಮತ್ತು ಒಂದು ಲೀಟರ್‌ಗೆ ₹45 ರಿಂದ ₹49 ಗೆ ಏರಿಕೆಯಾಗಿದೆ. ಹಾಲು ಉತ್ಪಾದನಾ ವೆಚ್ಚ ಮತ್ತು ರೈತರಿಗೆ ನೀಡುವ ಬೆಂಬಲವನ್ನು ಗಮನದಲ್ಲಿಟ್ಟುಕೊಂಡು ಈ ದರ ಪರಿಷ್ಕರಣೆ ಮಾಡಲಾಗಿದೆ. ಸರ್ಕಾರ ಈ ಹೆಚ್ಚಳದಿಂದ ಬಂದ ಆದಾಯವನ್ನು ಪೂರ್ಣವಾಗಿ ಹಾಲು ಉತ್ಪಾದಕರಿಗೆ ವರ್ಗಾಯಿಸಲು ಉದ್ದೇಶಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared