Union Budget 2023: ಕೇಂದ್ರ ಬಜೆಟ್‌ನಲ್ಲಿ ಇದೆಯಾ ಲೋಕಸಭಾ ಚುನಾವಣಾ ಲೆಕ್ಕಾಚಾರ?
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5ನೇ ಬಾರಿ ಬಜೆಟ್ ಮಂಡಿಸುತ್ತಿದ್ದು, ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ.
ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು,ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆ ಪೂರಕ ಬಜೆಟ್ ಮಂಡನೆ ಸಾಧ್ಯತೆ ಇದೆ. ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲ್ಲ, 2023ರ ಪೂರ್ಣ ಬಜೆಟ್‌ನಲ್ಲೇ ಚುನಾವಣಾ ಲೆಕ್ಕಾಚಾರ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಮೆಟ್ರೋ ರೈಲು ಜಾಲ ವಿಸ್ತರಣೆಗೆ ಕ್ರಮ ಸಾಧ್ಯತೆ ಇದ್ದು, ಅಮೃತ್ ಮಿಷನ್ ಸ್ಮಾರ್ಟ್ ಸಿಟಿ ಯೋಜನೆಗೆ ಒತ್ತು ನೀಡುವ ನಿರೀಕ್ಷೆ ಇದೆ. ಜಲ ಯೋಜನೆಗಳಿಗೆ ಹೆಚ್ಚಿನ ಅನುದಾನದ ನಿರೀಕ್ಷೆ ಇದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ಮೂಲ ಸೌಕರ್ಯ ವಲಯ, ನಗರಾಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಹಾಗೂ ಮನೆ ನಿರ್ಮಾಣ, ರೈಲ್ವೆ ಯೋಜನೆಗಳಿಗೆ ಪ್ರೋತ್ಸಾಹ ಸಿಗುತ್ತಾ ನೋಡಬೇಕಾಗಿದೆ.