ಅಪಘಾತದಲ್ಲಿ ಪಲ್ಟಿಯಾದ ಕಾರಿಗೆ ಹೊತ್ತಿಕೊಂಡ ಬೆಂಕಿ, ಸಂಪೂರ್ಣ ವಾಹನ ಸುಟ್ಟು ಕರಕಲು!
ಧಾರವಾಡದಿಂದ ಕುಮಟಾಕ್ಕೆ ತೆರಳುತ್ತಿದ್ದ ಟಾಟಾ ಟಿಯಾಗೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಅದೃಷ್ಠವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಂಡಿಯತ್ತ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಕಾರನ್ನು ಸರಿಯಾಗಿ ನಿಲ್ಲಿಸಿದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಕಾರು ಸಂಪೂರ್ಣ ಹೊತ್ತಿ ಉರಿದಿದೆ.
ಕಾರಾವಾರ(ಆ.25): ಧಾರವಾಡದಿಂದ ಕುಮಟಾಕ್ಕೆ ತೆರಳುತ್ತಿದ್ದ ಟಾಟಾ ಟಿಯಾಗೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಅದೃಷ್ಠವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಂಡಿಯತ್ತ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಕಾರನ್ನು ಸರಿಯಾಗಿ ನಿಲ್ಲಿಸಿದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಕಾರು ಸಂಪೂರ್ಣ ಹೊತ್ತಿ ಉರಿದಿದೆ.