Asianet Suvarna News Asianet Suvarna News

Agni Sreedhar: ಜಯರಾಜ್ ಗಂಗಾ ಮೇಲೆ ಕೋರ್ಟಿನಲ್ಲೇ ಹಲ್ಲೆಯ ಘಟನೆ ದೇಶದಲ್ಲೇ ಇತಿಹಾಸ

ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ್ ನಟಿಸಿ ನಿರ್ಮಾಣ ಮಾಡಿರುವ ಹೆಡ್‌ಬುಷ್‌ ಸಿನಿಮಾ ಅಕ್ಟೋಬರ್ 21ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈ ಚಿತ್ರದ ಬಗ್ಗೆ ಅಗ್ನಿ ಶ್ರೀಧರ್ ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

First Published Oct 27, 2022, 1:30 AM IST | Last Updated Oct 27, 2022, 1:30 AM IST

ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ್ ನಟಿಸಿ ನಿರ್ಮಾಣ ಮಾಡಿರುವ ಹೆಡ್‌ಬುಷ್‌ ಸಿನಿಮಾ ಅಕ್ಟೋಬರ್ 21ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಬೆಂಗಳೂರಿನ ಭೂಗತ ಲೋಕದ ಡಾನ್‌ ಜಯರಾಜ್‌ ಅವರ ಜೀವ ಆಧರಿತ ಕತೆ ಎಂದು ಹೇಳಲಾಗುತ್ತಿರುವ ಈ ಚಿತ್ರವಿದು. ಶೂನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಪಾಯಲ್‌ ರಜಪೂತ್‌ ನಟಿಸಿದ್ದಾರೆ. ಡಾಲಿ ಧನಂಜಯ್‌ ಇಲ್ಲಿ ಜಯರಾಜ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಲೂಸ್ ಮಾದ ಯೋಗಿ ಗಂಗ ಅನ್ನೋ ರೌಡಿ ಪಾತ್ರದಲ್ಲಿ ಮಿಂಚಿದ್ದಾರೆ. ಅಗ್ನಿ ಶ್ರೀಧರ್ ಬರೆದಿರುವ 'ದಾದಾಗಿರಿಯ ದಿನಗಳು' ಪುಸ್ತಕ ಆಧಾರಿತ ಸಿನಿಮಾ ಇದಾಗಿದ್ದು, ಇದೀಗ ಈ ಚಿತ್ರದ ಬಗ್ಗೆ ಅಗ್ನಿ ಶ್ರೀಧರ್ ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದು, ಜಯರಾಜ್-ಗಂಗಾ ಮೇಲೆ ಕೋರ್ಟಿನಲ್ಲೇ ಹಲ್ಲೆಯ ಘಟನೆ ದೇಶದಲ್ಲೇ ಇತಿಹಾಸ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

Video Top Stories