Interview: ಹಿರಿಯ ನಟ ಎಂ ಎಸ್ ಉಮೇಶ್ ಬದುಕು, ಸಿನಿ ಪ್ರಯಾಣ, ಚಿತ್ರರಂಗದ ಬಗ್ಗೆ ಮಾತು
ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು ಎಂ ಎಸ್ ಉಮೇಶ್ಇ (MS Umesh) ಇವರ ಹಾಸ್ಯವನ್ನು ನಾವ್ಯಾರೂ ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. 'ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ..... ಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..' ಹೀಗೆ ತಮ್ಮದೇ ಮ್ಯಾನರಿಸಂ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು ಎಂ. ಎಸ್. ಉಮೇಶ್.

1974 ರಲ್ಲಿ ಉಮೇಶ್, ಪುಟ್ಟಣ್ಣ ಕಣಗಾಲರ ‘ಕಥಾ ಸಂಗಮ' ಚಿತ್ರಕ್ಕೆ ತಿಮ್ಮರಾಯಿ ಪಾತ್ರಕ್ಕಾಗಿ ಆಯ್ಕೆಯಾಗುತ್ತಾರೆ. ಇದಾದ ನಂತರ ಅವರ ಚಿತ್ರರಂಗದ ನಂಟು ಬೆಳೆಯುತ್ತಾ ಬಂತು. ಗೋಲ್ ಮಾಲ್ ರಾಧಾಕೃಷ್ಣ, ಗುರು ಶಿಷ್ಯರು ಮುಂತಾದ ಚಿತ್ರಗಳಿಂದ ಇತ್ತೀಚಿನ ವೆಂಕಟ ಇನ್ ಸಂಕಟವರೆಗಿನ ಅವರ ಪಾತ್ರಗಳನ್ನು ಮೆಚ್ಚದಿರುವವರೇ ಇಲ್ಲ. ಇದುವರೆಗೂ 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿಮಯಿಸಿದ್ದಾರೆ. 50 ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಕಥೆ ಬರೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 6 ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇವರ ಆರಂಭಿಕ ಜೀವನ, ವೃತ್ತಿ ಜೀವನ, ಸಿನಿ ಜರ್ನಿಯ ಬಗ್ಗೆ ಅವರೇ ಮಾತನಾಡಿದ್ದಾರೆ ಕೇಳಿ.