Asianet Suvarna News Asianet Suvarna News

ದೀಪಾವಳಿಗೆ 'ನಮೋ' ಬಂಪರ್ ಗಿಫ್ಟ್: 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಣೆ

ದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಕೊಡುಗೆ ನೀಡಿದ್ದು, ಬೃಹತ್ ಉದ್ಯೋಗ ಮೇಳದ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ಕಲ್ಪಿಸಿದ್ದಾರೆ. 

First Published Oct 22, 2022, 4:32 PM IST | Last Updated Oct 22, 2022, 4:32 PM IST

10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ರೋಜ್‌ಗಾರ್ ಮೇಳಕ್ಕೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇಮಕಾತಿ ಪತ್ರ ಹಸ್ತಾಂತರಿಸುತ್ತಿದ್ದಾರೆ.  ಸಂಸದ ಪಿ.ಸಿ ಮೋಹನ್, ತೇಜಸ್ವಿ ಸೂರ್ಯ ಉಪಸ್ಥಿತಿಯಿದ್ದು,ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನೇಮಕಾತಿ ಪತ್ರ ಹಸ್ತಾಂತರ ನಡೆಯುತ್ತಿದೆ. ಅಂಚೆ ಇಲಾಖೆಯಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.ಕೇಂದ್ರದ ಇಲಾಖೆಗೆ 75,000 ಅಭ್ಯರ್ಥಿಗಳು ನೇಮಕವಾಗಿದ್ದಾರೆ.

ಟೀಂ ಇಂಡಿಯಾ ಏಷ್ಯಾಕಪ್ ಆಡಲು ಪಾಕ್‌ ಪ್ರವಾಸ ಕೈಗೊಳ್ಳದಿರುವ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು..?


 

Video Top Stories