ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ ಪೋಷಕರು, ನಾಯಿ ದಾಳಿಗೆ 8 ವರ್ಷದ ಬಾಲಕ ಸಾವು

ನಾಯಿ ದಾಳಿಗೆ ತೀವ್ರಗಾಯಗೊಂಡ ಬಾಲಕನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ನಡೆದಿದೆ. ಬೀದಿ ನಾಯಿಗಳ ಹಾವಳಿ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಕುಟುಬಂಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕದ್ದಾರೆ.
 

Share this Video
  • FB
  • Linkdin
  • Whatsapp

ಚಿತ್ರದುರ್ಗ(ಜು.24): ಬೀದಿನಾಯಿಗಳ ಹಾವಳಿಗೆ 8 ವರ್ಷದ ಬಾಲಕ ಬಲಿಯಾದ ಘಟನೆ ಚಿತ್ರದುರ್ಗದ ಬಿಳಿಕಲ್ಲು ನಾಯಕರಹಟ್ಟಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ವೇಳೆ ನಾಯಿ ದಾಳಿ ಮಾಡಿ ಬಾಲಕನ ಕಚ್ಚಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ ಪೊಷಕರಿಗೆ ಬರಸಿಡಿಲು ಎರಗಿದೆ.

Related Video