4ನೇ ಕ್ರಿಟಿಕ್ಸ್‌ ಅಕಾಡೆಮಿ ಅವಾರ್ಡ್‌ ; ಅತಿ ಹೆಚ್ಚು ಪ್ರಶಸ್ತಿ ಬಾಚಿಕೊಂಡ KGF 2 ಮತ್ತು ಕಾಂತಾರ

4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದಿದೆ.

Share this Video
  • FB
  • Linkdin
  • Whatsapp

4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯಿಂದ ಅತ್ಯುತ್ತಮ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಕಳೆದ ವರ್ಷ ಬಹಳ ಸದ್ದು ಮಾಡಿದ 'ಕಾಂತಾರ' ಹಾಗೂ 'KGF- 2' ಸಿನಿಮಾಗಳು ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾಗಿದ್ದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ‘ಕಾಂತರ’ದ ಕೈ ಸೇರಿದೆ. ಹಾಗೆ ಅತ್ಯುತ್ತಮ ನಟಿ ಪ್ರಶಸ್ತಿಯು ಗಾಳಿಪಟ 2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆ ಮುಡಿಗೆರಿದೆ.ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಮೋಹಕ ತಾರೆ ರಮ್ಯಾ, ನಟಿಯರಾದ ಕಾರುಣ್ಯ ರಾಮ್, ನಿರ್ದೇಶಕರಾದ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಬಿ.ಎಸ್.ಲಿಂಗದೇವರು, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್, ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video