Asianet Suvarna News Asianet Suvarna News

ಪ್ರಧಾನಿಗೆ ಮದುವೆ ಆಮಂತ್ರಣ ನೀಡಿದ ಜೂನಿಯರ್ ರೆಬೆಲ್ ಸ್ಟಾರ್

ಅಭಿಷೇಕ್ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಇಬ್ಬರೂ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ನೀಡಿದ್ದಾರೆ.

ಅಭಿಷೇಕ್ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಇಬ್ಬರೂ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ನೀಡಿದ್ದಾರೆ.  ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.  ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಹಸೆಮಣೆ ಏರುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಭಿಷೇಕ್ ಮತ್ತು ಅವಿವಾ ಈಗ ಮದುವೆ ತಯಾರಿಯಲ್ಲಿದ್ದಾರೆ.ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಅಂಬರೀಶ್ ಇಬ್ಬರೂ ಪ್ರಧಾನಿಗೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ಅಭಿಷೇಕ್ ಮತ್ತು ಸುಮಲತಾ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೋದಿ ಜೊತೆ ಇಬ್ಬರೂ ಕ್ಯಾಮರಾಗೆ ಪೋಸ್ ನೀಡಿದ್ದು ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ. 

Video Top Stories