ವಿಜಯ್ ವರ್ಮಾ ನನ್ನ ಖುಷಿಯ ಖಜಾನೆ: ಪ್ರೀತಿ ಒಪ್ಪಿಕೊಂಡ ತಮನ್ನಾ
ಬಹುಭಾಷ ನಟಿ ತಮನ್ನಾ ಲವ್ ಸ್ಟೋರಿ ಬಗ್ಗೆ ಇತ್ತೀಚೆಗೆ ಹಲವು ಗಾಸಿಪ್ ಹರಿದಾಡಿದ್ದವು. ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಅವರ ಹೆಸರು ಕೇಳಿ ಬಂದಿತ್ತು. ಇದೀಗ ಗಾಸಿಪ್ ಪಕ್ಕಾ ಆಗಿದೆ.
ನಟಿ ತಮನ್ನಾ ತಮ್ಮ ಹಾಗೂ ವಿಜಯ್ ವರ್ಮಾ ನಡುವಿನ ಪ್ರೇಮವನ್ನು ಒಪ್ಪಿಕೊಂಡಿದ್ದಾರೆ. ತಾವು ವಿಜಯ್ ವರ್ಮಾ ಅವರನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾರೆ. ಯಾರೋ ಒಬ್ಬರು ನಿಮ್ಮ ಸಹನಟರಾಗಿದ್ದ ಮಾತ್ರಕ್ಕೆ ಅವರೊಡನೆ ಆಕರ್ಷಿತರಾಗಲು ಸಾಧ್ಯವಿಲ್ಲ. ಏಕೆಂದರೆ ನಾನು ಈಗಾಗಲೇ ಹಲವಾರು ನಟರೊಡನೆ ನಟಿಸಿದ್ದೇನೆ. ಯಾರ ಕಡೆಗೂ ನಾನು ಆಕರ್ಷಿತಳಾಗಿಲ್ಲ. ಯಾರ ಬಗ್ಗೆಯಾದರೂ ನೀವು ನಿಜಕ್ಕೂ ಮನಸೋತಿರೆಂದರೆ, ಭಾವನೆಗಳು ಹುಟ್ಟಿದವೆಂದರೆ ಅದು ಬಹಳ ಖಾಸಗಿ ವಿಷಯವಾಗಿರುತ್ತದೆ. ಆ ವ್ಯಕ್ತಿ ಹೇಗಿದ್ದಾನೆ, ಏನು ಮಾಡುತ್ತಿದ್ದಾನೆ, ಯಶಸ್ವಿ ವ್ಯಕ್ತಿಯೋ ಎಂಬುದೆಲ್ಲವೂ ಗಣನೆಗೆ ಬರುವುದೇ ಇಲ್ಲ ಎಂದಿದ್ದಾರೆ. ವಿಜಯ್ ವರ್ಮಾ ನನ್ನ ಖುಷಿಯ ಖಜಾನೆ ಎಂದು ಬಣ್ಣಿಸಿದ್ದು, ಇಬ್ಬರೂ ಒಟ್ಟಿಗೆ ನಟಿಸಿರುವ ಲಸ್ಟ್ ಸ್ಟೊರೀಸ್ 2 ಸಿನಿಮಾದ ಸೆಟ್'ನಲ್ಲಿಯೇ ನಮ್ಮ ಪ್ರೀತಿ ಶುರುವಾಯಿತು ಎಂದು ಸಹ ತಮನ್ನಾ ಹೇಳಿಕೊಂಡಿದ್ದಾರೆ.