Asianet Suvarna News Asianet Suvarna News

Aishwarya Rai Pregnant: ಬಾಲಿವುಡ್ ನಟಿ ಐಶ್ವರ್ಯ ರೈ ಮತ್ತೆ ಗರ್ಭಿಣಿನಾ?

ಬಾಲಿವುಡ್ ನಟಿ ಐಶ್ವರ್ಯ ರೈ 'ಪೊನ್ನಿಯನ್ ಸೆಲ್ವನ್' ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಬೆನ್ನಲ್ಲೇ ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಾಗುತ್ತಿದ್ದಾರೆ. ಮಾಜಿ ಭುವನ ಸುಂದರಿ ಐಶ್ವರ್ಯ ರೈ ಮತ್ತೆ ಗರ್ಭಿಣಿನಾ ಅಂತಾ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. 

Sep 26, 2022, 11:55 PM IST

ಬಾಲಿವುಡ್ ನಟಿ ಐಶ್ವರ್ಯ ರೈ 'ಪೊನ್ನಿಯನ್ ಸೆಲ್ವನ್' ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಬೆನ್ನಲ್ಲೇ ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಾಗುತ್ತಿದ್ದಾರೆ. ಮಾಜಿ ಭುವನ ಸುಂದರಿ ಐಶ್ವರ್ಯ ರೈ ಮತ್ತೆ ಗರ್ಭಿಣಿನಾ ಅಂತಾ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಗರ್ಭಿಣಿ ಎನ್ನುವಂತಹ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು! ಐಶ್ವರ್ಯ ರೈ ಮತ್ತೆ ಗರ್ಭಿಣಿನಾ, ಬಚ್ಚನ್ ಕುಟುಂಬಕ್ಕೆ ಮತ್ತೊಬ್ಬ ಕುಡಿಯ ಎಂಟ್ರಿ ಆಗುತ್ತಿದ್ಯಾ ಅಂತಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಇದಕ್ಕೆಲ್ಲಾ ಕಾರಣ ವಿಮಾನ ನಿಲ್ದಾಣದಲ್ಲಿ ಐಶ್ವರ್ಯ ರೈ ಎಂಟ್ರಿ. ಶುಕ್ರವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆಗ ಪಾಪರಾಜಿಗಳು ಫೋಟೋ ತೆಗೆಯುವಾಗ ಹೊಟ್ಟೆಯತ್ತ ಕೈ ಹಿಡಿದುಕೊಂಡು ನಟಿ ಹೊರನಡೆದಿದ್ದಾರೆ. ಈ ನಡೆಯಿಂದ ಐಶ್ವರ್ಯ ಮತ್ತೆ ಗರ್ಭಿಣಿನಾ ಅಂತಾ ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ವದಂತಿ ನಿಜಾನಾ ಅಂತಾ ಮುಂದಿನ ದಿನಗಳವೆರೆಗೆ ಕಾದುನೋಡಬೇಕಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment