Virat Kohli: ಸೋಷಿಯಲ್ ಮೀಡಿಯಾದಲ್ಲಿ ವಿರುಷ್ಕಾ ದಂಪತಿ ಪುತ್ರಿಯ ಫೋಟೋ ವೈರಲ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ, ವಿರಾಟ್ ಕೊಹ್ಲಿ ಮುದ್ದಿನ ಮಗಳು ವಮಿಕಾ ಫೋಟೋ ವೈರಲ್ ಆಗಿದೆ. ಭಾರತದ ಇನ್ನಿಂಗ್ಸ್‌ನಲ್ಲಿ ವಿರಾಟ್ ಅರ್ಧಶತಕವನ್ನು ಪೂರ್ಣಗೊಳಿಸಿದಾಗ ಅನುಷ್ಕಾ ಶರ್ಮಾ ತನ್ನ ಮಗಳನ್ನು ಎತ್ತಿಕೊಂಡಿದ್ದರು.

Share this Video
  • FB
  • Linkdin
  • Whatsapp

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ, ವಿರಾಟ್ ಕೊಹ್ಲಿ (Virat Kohli) ಮುದ್ದಿನ ಮಗಳು ವಮಿಕಾ (Vamika) ಫೋಟೋ ವೈರಲ್ (Photo Viral) ಆಗಿದೆ. ಭಾರತದ ಇನ್ನಿಂಗ್ಸ್‌ನಲ್ಲಿ ವಿರಾಟ್ ಅರ್ಧಶತಕವನ್ನು ಪೂರ್ಣಗೊಳಿಸಿದಾಗ ಅನುಷ್ಕಾ ಶರ್ಮಾ (Anushka Sharma) ತನ್ನ ಮಗಳನ್ನು ಎತ್ತಿಕೊಂಡಿದ್ದರು. ಅಷ್ಟೇ ಅಲ್ಲ ಕೊಹ್ಲಿ ಅರ್ಧ ಶತಕ ಬಾರಿಸಿದ ಬಳಿಕ ವಮಿಕಾ, ಅವರನ್ನು ನೋಡಿ ತಮಾಷೆಯ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ಈ ವೇಳೆ ಅನುಷ್ಕಾ ಹಾಗೂ ವಮಿಕಾ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. 

ಬಾಡಿಗೆ ತಾಯ್ತನವ ಹಲವು ಸತ್ಯ ಮುಚ್ಚಿಟ್ಟ Priyanka Chopra!

ಕ್ರಿಕೆಟ್‌ ನೇರ ಪ್ರಸಾರದಲ್ಲಿ ಈ ದೃಶ್ಯ ಸೆರೆಯಾಗಿತ್ತು. ಸ್ವಲ್ಪ ಹೊತ್ತಿನಲ್ಲಿ ವಮಿಕಾ ಚಿತ್ರ ವೈರಲ್‌ ಆಗಿತ್ತು. ಅಭಿಮಾನಿಗಳು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರವನ್ನು ಹಂಚಿಕೊಂಡಿದ್ದರು. ಇನ್ನು ಒಂದು ವರ್ಷದ ಅವಧಿಯಲ್ಲಿ ವಿರುಷ್ಕಾ ದಂಪತಿ ಎಲ್ಲಿಯೂ ಮಗುವಿನ ಮುಖವನ್ನು ತೋರಿಸಿಲ್ಲ. ಅವಳಿಗೆ ಅನಗತ್ಯ ಪ್ರಚಾರ ನೀಡುವುದು ಬೇಡ ಹಾಗೂ ಸೋಶಿಯಲ್​ ಮೀಡಿಯಾದಿಂದ (Social Media) ಆಕೆಯನ್ನು ದೂರವೇ ಇಡಬೇಕು ಎಂಬ ನಿರ್ಧಾರದ ಹಿನ್ನೆಲೆಯಲ್ಲಿ ದಂಪತಿ ಆಕೆಯ ಫೋಟೋ ಎಲ್ಲಿಯೂ ಹಂಚಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video