
Rakul Preet: ಹಸೆಮಣೆ ಏರಲು ರೆಡಿ ಆದ ರಾಕುಲ್: ಹುಡುಗ ಯಾರು ಗೊತ್ತಾ?
ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದು, ಈ ವಿಚಾರ ಕೇಳಿ ಫ್ಯಾನ್ಸ್ ಫುಲ್ ಖುಷಿ ಪಟ್ಟಿದ್ದಾರೆ.
ನಟಿ ರಾಕುಲ್ ಪ್ರೀತ್ ಸಿಂಗ್ ಸೈಲೆಂಟಾಗಿ ಮದುವೆಗೆ ಸೈ ಅಂತ ಹೇಳುತ್ತಿದ್ದಾರೆ. ನಿರ್ಮಾಪಕ ಜಾಕಿ ಭಗ್ನಾನಿ ಜತೆ ರಾಕುಲ್ ಡೇಟಿಂಗ್ ನಡೆಸುತ್ತಿದ್ದು, ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಒಟ್ಟಿನಲ್ಲಿ ಬಾಲಿವುಡ್'ನಲ್ಲಿ ಒಬ್ಬರಾದ ಮೇಲೆ ಒಬ್ಬರು ಮದುವೆ ಆಗುತ್ತಿದ್ದಾರೆ. ಮೇ ತಿಂಗಳಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನಲಾಗುತ್ತಿದ್ದು, ಈ ವಿಚಾರದಲ್ಲಿ ಈ ಜೋಡಿ ಸ್ಪಷ್ಟನೆ ನೀಡಿಲ್ಲ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ