Breast Cancer: ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಹಂಸ ನಂದಿನಿ
ಕನ್ನಡ ಹಾಗು ತೆಲುಗು ಚಿತ್ರರಂಗದಲ್ಲಿ ಬಣ್ಣ ಹಚ್ಚಿದ್ದ ನಟಿ ಹಂಸ ನಂದಿನಿಗೆ ಸ್ತನ ಕ್ಯಾನ್ಸರ್ ಪತ್ತೆಯಾಗಿದೆ. ಅವರನ್ನು ನೋಡಿ ಅಭಿಮಾನಿಗಳು ನಿಜಕ್ಕೂ ಶಾಕ್ ಆಗಿದ್ದಾರೆ. ಕೂದಲು ಇಲ್ಲದ ತಲೆಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಾವು ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಹೋರಾಟದಲ್ಲಿ ಗೆದ್ದು ಬರಲಿದೆ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಕನ್ನಡ ಹಾಗು ತೆಲುಗು ಚಿತ್ರರಂಗದಲ್ಲಿ ಬಣ್ಣ ಹಚ್ಚಿದ್ದ ನಟಿ ಹಂಸ ನಂದಿನಿಗೆ(Hamsa Nandini) ಸ್ತನ ಕ್ಯಾನ್ಸರ್(Breast Cancer) ಪತ್ತೆಯಾಗಿದೆ. ಅವರನ್ನು ನೋಡಿ ಅಭಿಮಾನಿಗಳು ನಿಜಕ್ಕೂ ಶಾಕ್ ಆಗಿದ್ದಾರೆ. ಕೂದಲು ಇಲ್ಲದ ತಲೆಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಾವು ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಹೋರಾಟದಲ್ಲಿ ಗೆದ್ದು ಬರಲಿದೆ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
Breast Cancer : ಭಾವನಾತ್ಮಕ ಪತ್ರ ಬರೆದ ಸ್ಯಾಂಡಲವುಡ್ ನಟಿ
ಪೋಷಕ ಪಾತ್ರಗಳ ಮೂಲಕ ಹೆಸರು ಮಾಡಿದ್ದ ನಂದಿನಿ, ಐಟಂ ಸಾಂಗ್‌ಗಳಲ್ಲಿಯೂ ಹೆಜ್ಜೆ ಹಾಕಿದ್ದರು. 37 ವರ್ಷದ ನಟಿ ಕಳೆದ 4 ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶವೊಂದನ್ನು ತಿಳಿಸಿದ್ದಾರೆ. ಅಭಿಮಾನಿಗಳು ಹಂಸ ಅವರಿಗೆ ಸಾಂತ್ವನ ಮತ್ತು ಧೈರ್ಯ ಹೇಳಿದ್ದಾರೆ.