RRR Movie: ಆ ಒಂದು ಹಾಡಿಗೆ 17 ಟೇಕ್‌ಗಳನ್ನು ತೆಗೆದುಕೊಂಡಿದ್ದ ರಾಜಮೌಳಿ!

'ಆರ್‌ಆರ್‌ಆರ್' ಸಿನಿಮಾದ ಯಶಸ್ಸಿನ ಪಾರ್ಟಿಯಲ್ಲಿ ರಾಜಮೌಳಿ ನಾಟು ನಾಟು ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Share this Video
  • FB
  • Linkdin
  • Whatsapp

ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ (SS Rajamouli) ಮುಟ್ಟಿದ್ದೆಲ್ಲಾ ಚಿನ್ನ ಎಂಬ ಮಾತಿದೆ. ಅವರ ಪ್ರತಿ ಸಿನಿಮಾನೂ ದಾಖಲೆಯ ಹೆಸರು ಬರೆಯುತ್ತೆ. ಇತ್ತೀಚೆಗೆ ಬಿಡುಗಡೆಯಾಗಿರೋ 'ಆರ್‌ಆರ್‌ಆರ್' (RRR) ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಗಲ್ಲಾಪೆಟ್ಟಿಗೆ ತುಂಬಿಸ್ತಿದೆ. ಈ ಸಿನಿಮಾದ ನಾಟು ನಾಟು ಹಾಡು ಮತ್ತು ಅದರ ಡ್ಯಾನ್ಸ್ ಸಖತ್ ಫೇಮಸ್. ಇದೇ ಹಾಡಿಗೆ ನಿರ್ದೇಶಕ ರಾಜಮೌಳಿ ನೃತ್ಯ ಮಾಡಿದ್ದಾರೆ. ಹೌದು! ಸ್ವಲ್ಪ ಟ್ರಿಕ್ಕಿ ಅನಿಸೋ ಈ ಪೆಪ್ಪಿ ಸಾಂಗ್‌ಗೆ ಸೆಲೆಬ್ರಿಟಿಗಳು ಸೇರಿದಂತೆ ಸಾಮಾನ್ಯ ಜನ ನೃತ್ಯ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ (Social Media) ಪೋಸ್ಟ್ ಮಾಡ್ತಿದ್ದಾರೆ.

ಮೂರು ದಿನಕ್ಕೆ 500 ಕೋಟಿ ಬಾಚಿತಾ RRR? ರೆಕಾರ್ಡ್ ಬ್ರೇಕ್ ಮಾಡುತ್ತಾರಾ ರಾಜಮೌಳಿ?

ಇದೇ ಹಾಡಿಗೆ ರಾಜಮೌಳಿ ಸಹ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ನಡೆದ 'ಆರ್‌ಆರ್‌ಆರ್' ಸಿನಿಮಾದ ಯಶಸ್ಸಿನ ಪಾರ್ಟಿಯಲ್ಲಿ ರಾಜಮೌಳಿ ನಾಟು ನಾಟು ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 'ಆರ್‌ಆರ್‌ಆರ್' ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತರಾಮ ರಾಜು ಮತ್ತು ಕೋಮರಾಮ್ ಭೀಮ್ ಅವರ ಜೀವನದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ. ಚಿತ್ರದಲ್ಲಿ ರಾಮ್ ಚರಣ್ (Ram Charan) ಅಲ್ಲೂರಿ ಸೀತರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕೋಮರಾಮ್ ಭೀಮ್ ಪಾತ್ರದಲ್ಲಿ ಜೂ.ಎನ್‌ಟಿಆರ್ (Jr NTR) ಕಾಣಿಸಿಕೊಂಡಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video